Friday, May 8, 2026
Friday, May 8, 2026

ದುಬಾರೆಯಲ್ಲಿ ನೂತನ ತೂಗು ಸೇತುವೆ ನಿರ್ಮಾಣ: ಈಶ್ವರ ಖಂಡ್ರೆ

ಪ್ರವಾಸಿಗರ ಅನುಕೂಲಕ್ಕಾಗಿ ಮತ್ತು ದುಬಾರೆ ಹಾಡಿಯಲ್ಲಿರುವ 150 ಮನೆಗಳ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನಗರಕ್ಕೆ ಬರಲು ಅನುಕೂಲವಾಗುವಂತೆ 7 ಕೋಟಿ 30 ಲಕ್ಷ ರು.ವೆಚ್ಚದಲ್ಲಿ ಗುಣಮಟ್ಟದ ತೂಗು ಸೇತುವೆ ನಿರ್ಮಿಸಲಾಗುತ್ತಿದೆ.

ವನ್ಯಜೀವಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಜನರ ಅಮೂಲ್ಯ ಜೀವ, ಬೆಳೆ ಹಾನಿ ತಪ್ಪಿಸಲು ಆಯ್ದ ಪ್ರದೇಶದಲ್ಲಿ, ಆಯ್ದ ವನ್ಯಜೀವಿಗಳ ಸಂತಾನ ನಿಯಂತ್ರಣದ ಸಲಹೆಗಳು ಬಂದಿದ್ದು, ಈ ಬಗ್ಗೆ ಸಾರ್ವಜನಿಕವಾಗಿ ತಜ್ಞರ ಮಟ್ಟದಲ್ಲಿ ಚರ್ಚೆ ಆಗುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ನೂತನ ತೂಗುಸೇತುವೆ ಮತ್ತು ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನೂತನ ವಾಹನಗಳಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ ನಿಯಂತ್ರಿಸಲು ತಜ್ಞರ ಸಮಿತಿ ರಚಿಸಲಾಗಿದ್ದು, ಅವರು ವರದಿ ನೀಡಿದ್ದಾರೆ. ಕಾಡಿನಂಚಿನ ಜನರು ಕೂಡ ಈ ಬಗ್ಗೆ ಸಲಹೆ ನೀಡಬೇಕು ಎಂದರು.

ದುಬಾರೆಯಲ್ಲಿ ನೂತನ ಮೇಲ್ಸೇತುವೆ

ಪ್ರವಾಸಿಗರ ಅನುಕೂಲಕ್ಕಾಗಿ ಮತ್ತು ದುಬಾರೆ ಹಾಡಿಯಲ್ಲಿರುವ 150 ಮನೆಗಳ ನಿವಾಸಿಗಳಿಗೆ ತುರ್ತು ಸಂದರ್ಭದಲ್ಲಿ ನಗರಕ್ಕೆ ಬರಲು ಅನುಕೂಲವಾಗುವಂತೆ 7 ಕೋಟಿ 30 ಲಕ್ಷ ರು.ವೆಚ್ಚದಲ್ಲಿ ಗುಣಮಟ್ಟದ ತೂಗು ಸೇತುವೆ ನಿರ್ಮಿಸಲಾಗುತ್ತಿದೆ. ಈ ಮೂಲಕ ದೀರ್ಘ ಕಾಲದ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ದುಬಾರೆ ಆನೆ ಶಿಬಿರಕ್ಕೆ 100 ವರ್ಷಗಳ ಇತಿಹಾಸವಿದೆ. ಇಲ್ಲಿ 15 ಕುಮ್ಕಿ ಆನೆಗಳಿದ್ದು, ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿವೆ. ಆನೆಗಳಿಗೆ ಪೂಜ್ಯ ಸ್ಥಾನವಿರುವುದರಿಂದ ನಾವು ವನ್ಯಜೀವಿಗಳ ಸಂರಕ್ಷಣೆಗೂ ಮುಂದಾಗಬೇಕು. ಕಾಡಿನಂಚಿನ ಜನರೊಂದಿಗೆ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಕಾನೂನು ಪಾಲಿಸಿ, ಜನರಿಗೆ ಅರಿವು ಮೂಡಿಸಿ, ಆದರೆ ಹೆದರಿಸಬೇಡಿ ಎಂದು ಕಿವಿ ಮಾತು ಹೇಳಿದರು.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat