ಮಳೆಯ ಅಬ್ಬರ: ಆಗಸ್ಟ್ 3ರವರೆಗೆ ಅಮರನಾಥ ಯಾತ್ರೆ ಬಂದ್
ಅಮರನಾಥ ಯಾತ್ರೆಗೆ ಮತ್ತೆ ವಿಘ್ನ ಎದುರಾಗಿದೆ. ಭಾರಿ ಮಳೆಯಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 3ರವರೆಗೆ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆಯಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 3ರವರೆಗೆ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಹಲ್ಯಾಮ್ ಹಾಗೂ ಬಾಲ್ ಟಾಲ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಮತ್ತು ದುರಸ್ತಿ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಯಾತ್ರೆಯನ್ನು ಸ್ಥಗಿತಕೊಳಿಸಲಾಗಿದೆ.
ಇಂದು ಬೆಳಿಗ್ಗೆ(ಆಗಸ್ಟ್ 1ರಂದು) ಪಹಲ್ಯಾಮ್ ಮಾರ್ಗವನ್ನು ಬಂದ್ ಮಾಡಲಾಗಿತ್ತು.ಆದರೆ ಬಾಲ್ ಟಾಲ್ ಮಾರ್ಗದಿಂದ ಅಮರನಾಥ ಯಾತ್ರೆಗೆ ಅನುಮತಿ ನೀಡಲಾಗಿತ್ತು. ಅಲ್ಲಿಯೂ ಹೆಚ್ಚಿನ ಮಳೆಯಾದ ಕಾರಣದಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಶ್ಮೀರ ವಿಭಾಗೀಯ ಆಯುಕ್ತ ವಿಜಯ್ ಕುಮಾರ್ ಭಿದೂರಿ ಮಾಹಿತಿ ನೀಡಿದ್ದಾರೆ.