Saturday, July 11, 2026
Saturday, July 11, 2026

ಬೋಟ್‌ ಮಗುಚಿ 15 ಭಾರತೀಯ ಪ್ರವಾಸಿಗರು ಜಲ ಸಮಾಧಿ

ಮಧ್ಯ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ್ದ ದೋಣಿ ದುರಂತದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಅಪಘಾತ ವಿಯೆಟ್ನಾಂನಲ್ಲೂ ಸಂಭವಿಸಿದೆ. ಪ್ರವಾಸಕ್ಕೆಂದು ತೆರಳದಿದ್ದ ಭಾರತೀಯ ಮೂಲದ 15 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹಲವಾರು ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ದುರ್ಘಟನೆ ನಡೆದಿದೆ.

ವಿಯೆಟ್ನಾಂನಲ್ಲಿ ದೋಣಿ ದುರಂತ ಸಂಭವಿಸಿದ್ದು, ಸುಮಾರು 15 ಮಂದಿ ಭಾರತೀಯರು ದುರ್ಮರಣಕ್ಕೀಡಾಗಿದ್ದಾರೆ. ಹಲವು ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ದುರ್ಘಟನೆ ದಕ್ಷಿಣ ವಿಯೆಟ್ನಾಂನ ಜನಪ್ರಿಯ ತಾಣವಾದ ಫು ಕ್ವಾಕ್ ದ್ವೀಪದ ಬಳಿ ಸಂಭವಿಸಿದೆ. ಕರಾವಳಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ವಿಯೆಟ್ನಾಂನಲ್ಲಿರುವ ಭಾರತೀಯ ರಾಯಭಾರ ಕಚೇರಿ ಈ ಘಟನೆಯನ್ನು ದೃಢಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ ಎಂದು ತಿಳಿಸಿದೆ. ಇತ್ತೀಚಿನ ವರದಿಗಳ ಪ್ರಕಾರ, ದುರಂತದಲ್ಲಿ ಸುಮಾರು 15 ಮಂದಿ ಭಾರತೀಯ ನಾಗರಿಕರು ಸಾವಿಗೀಡಾಗಿದ್ದಾರೆ. ಹನೋಯ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಪ್ರಕಾರ, ಹಡಗಿನಲ್ಲಿ 36 ಜನರಿದ್ದರು.

ಇದನ್ನೂ ಓದಿ: ಮ್ಯೂಸಿಯಂ ಆಫ್ ಎಕ್ಸ್‌ಪ್ಲೋರೇಷನ್ ಉದ್ಘಾಟನೆ

21 ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಹಡಗಿನಲ್ಲಿ 32 ಭಾರತೀಯ ಪ್ರವಾಸಿಗರು, ಮೂವರು ಸಿಬ್ಬಂದಿ ಮತ್ತು ಒಬ್ಬ ಸಹಾಯಕ ಸೇರಿದಂತೆ 36 ಜನರು ಇದ್ದರು. ಹೊನ್ ಮೇ ರುಟ್ ನ್ಗೋಯ್ ದ್ವೀಪದಿಂದ ಆನ್ ಥೋಯ್ ಬಂದರಿಗೆ ಹೊರಟ ಸ್ವಲ್ಪ ಸಮಯದ ನಂತರ, ಬಿರುಗಾಳಿಯಿಂದಾಗಿ ದೋಣಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ನೀರಿಗೆ ಬಿದ್ದರು.

https://x.com/AmbHanoi/status/2075868586690945210?ref_src=twsrc%5Etfw%7Ctwcamp%5Etweetembed%7Ctwterm%5E2075868586690945210%7Ctwgr%5E2e04ca5d246b966fd5853918fa397b33f95085b5%7Ctwcon%5Es1_c10&ref_url=https%3A%2F%2Fvishwavani.news%2Fforeign%2Fvietnam-boat-tragedy-15-indian-tourists-killed-83435.html

ʻವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದೆ. ಸ್ಥಳೀಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಸುತ್ತಿದ್ದಾರೆ. ಬಳಿಕವಷ್ಟೇ ಘಟನೆಯ ನಿಖರವಾದ ವಿವರಗಳು ತಿಳಿದುಬರಲಿದೆʼ ಎಂದು ರಾಯಭಾರ ಕಚೇರಿ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಸಂತ್ರಸ್ತ ಪ್ರವಾಸಿಗರು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡುವ ಸಲುವಾಗಿ, ಭಾರತೀಯ ರಾಯಭಾರ ಕಚೇರಿಯು ಎರಡು ಸ್ಥಳಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆದಿದೆ. ಹೋ ಚಿ ಮಿನ್ಹ್ ನಗರದಲ್ಲಿರುವ ಭಾರತೀಯ ದೂತಾವಾಸ ಮತ್ತು ಹನೋಯ್‌ನಲ್ಲಿರುವ ರಾಯಭಾರ ಕಚೇರಿಯಲ್ಲಿ ಸಹಾಯವಾಣಿ ತೆರೆದಿದೆ.

ಮಾಹಿತಿ ಅಥವಾ ಸಹಾಯ ಬಯಸುವವರು ಹೋ ಚಿ ಮಿನ್ಹ್ ನಗರದ ನಿಯಂತ್ರಣ ಕೊಠಡಿಯನ್ನು +84 36 281 7930, +84 91 552 37 14 ಮತ್ತು +84 33 452 0414 ನಲ್ಲಿ ಸಂಪರ್ಕಿಸಬಹುದು. ಹನೋಯ್‌ನಲ್ಲಿರುವ ನಿಯಂತ್ರಣ ಕೊಠಡಿಯನ್ನು +84 91 308 9165 ನಲ್ಲಿ ಸಂಪರ್ಕಿಸಬಹುದು.

ಘಟನೆಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳು ಅಥವಾ ಬೆಂಬಲಕ್ಕಾಗಿ ಎರಡೂ ನಿಯಂತ್ರಣ ಕೊಠಡಿಗಳು ಲಭ್ಯವಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಜನಪ್ರಿಯ ಪ್ರವಾಸಿ ಕೇಂದ್ರ

ಥೈಲ್ಯಾಂಡ್ ಕೊಲ್ಲಿಯಲ್ಲಿರುವ ಫು ಕ್ವೋಕ್ ದ್ವೀಪವು ಬಿಳಿ ಮರಳಿನ ಕಡಲತೀರಗಳು ಮತ್ತು ರೆಸಾರ್ಟ್‌ಗಳಿಗೆ ಹೆಸರುವಾಸಿಯಾಗಿದೆ. ಕಳೆದ ಕೆಲವು ವರ್ಷಗಳಿಂದ ನೇರ ವಿಮಾನಗಳು ಮತ್ತು ಸರಳೀಕೃತ ವೀಸಾ ಪ್ರಕ್ರಿಯೆಗಳಿಂದಾಗಿ ಹೆಚ್ಚಿನ ಭಾರತೀಯ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.

ರಕ್ಷಣಾ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ರಾಜತಾಂತ್ರಿಕ ಸಿಬ್ಬಂದಿ ವಿಯೆಟ್ನಾಂ ಪ್ರಾಂತೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಅಪಘಾತಕ್ಕೆ ಕಾರಣ ಮತ್ತು ರಕ್ಷಿಸಲ್ಪಟ್ಟವರ ಗುರುತಿನ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ