Friday, March 27, 2026
Friday, March 27, 2026

ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಬದಲಾವಣೆಗೆ ಎಐ ಕಾರ್ಯಾಗಾರ

ಎಐ ವೇಗವಾಗಿ ಗ್ರಾಹಕರ ನಿರೀಕ್ಷೆಗಳನ್ನು ಮತ್ತು ವ್ಯವಹಾರ ಮಾದರಿಗಳನ್ನು ಮರುರೂಪಿಸುತ್ತಿರುವ ಈ ಕಾಲದಲ್ಲಿ, ವೃತ್ತಿಪರರಿಗೆ ಪ್ರಾಯೋಗಿಕ ಉಪಕರಣಗಳು ಮತ್ತು ಒಳನೋಟಗಳನ್ನು ಒದಗಿಸುವುದು ಇದರ ಮುಖ್ಯ ಗುರಿ

ಪ್ರವಾಸೋದ್ಯಮದಲ್ಲಿ ಡಿಜಿಟಲ್ ಆವಿಷ್ಕಾರವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಪ್ರವಾಸೋದ್ಯಮ ಫೋರಂ (ಕೆಟಿಎಫ್‌), ಭಾರತ ಸರಕಾರ ಪ್ರವಾಸೋದ್ಯಮ ಸಚಿವಾಲಯದ ಸಹಯೋಗದೊಂದಿಗೆ “ಪ್ರವಾಸೋದ್ಯಮ ವೃತ್ತಿಪರರಿಗಾಗಿ ಎಐ” ಎಂಬ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮವು ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ಏರ್ಪಡಿಸಲಾಗಿದ್ದು, ತಮ್ಮ ವ್ಯವಹಾರ ಕಾರ್ಯಾಚರಣೆಗಳಲ್ಲಿ ಕೃತಕ ಬುದ್ಧಿಮತ್ತೆಯನ್ನು ಸಂಯೋಜಿಸಲು ಆಸಕ್ತಿ ಹೊಂದಿರುವ ಟ್ರಾವೆಲ್ ಏಜೆಂಟ್‌ಗಳು, ಟೂರ್ ಆಪರೇಟರ್‌ಗಳು ಮತ್ತು ಆತಿಥ್ಯ ಕ್ಷೇತ್ರದ ವೃತ್ತಿಪರರು ಭಾಗಿಯಾಗಿದ್ದರು. ಸುಮಾರು 40-50 ಪ್ರತಿನಿಧಿಗಳು ಭಾಗಿಯಾಗಿ ಇದರ ಉಪಯೋಗ ಪಡೆದುಕೊಂಡರು.

ಇದನ್ನೂ ಓದಿ: ಲಕ್ಕುಂಡಿಯಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ: ಎಚ್‌.ಕೆ. ಪಾಟೀಲ್‌

ಈ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಕೆಇಎಫ್‌ ಅಧ್ಯಕ್ಷ ಪ್ಯಾಟ್ರಿಕ್‌, “ಪ್ರವಾಸೋದ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಳವಡಿಕೆಯ ಬೆಳೆಯುತ್ತಿರುವ ಅಗತ್ಯವನ್ನು ಪೂರೈಸಲು ಈ ಕಾರ್ಯಾಗಾರವನ್ನು ವಿನ್ಯಾಸಗೊಳಿಸಲಾಗಿದೆ. ಎಐ ವೇಗವಾಗಿ ಗ್ರಾಹಕರ ನಿರೀಕ್ಷೆಗಳನ್ನು ಮತ್ತು ವ್ಯವಹಾರ ಮಾದರಿಗಳನ್ನು ಮರುರೂಪಿಸುತ್ತಿರುವ ಈ ಕಾಲದಲ್ಲಿ, ವೃತ್ತಿಪರರಿಗೆ ಪ್ರಾಯೋಗಿಕ ಉಪಕರಣಗಳು ಮತ್ತು ಒಳನೋಟಗಳನ್ನು ಒದಗಿಸುವುದು ಇದರ ಮುಖ್ಯ ಗುರಿ” ಎಂದು ಹೇಳಿದರು.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..