ದೆಹಲಿ: ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಿಂದಾಗಿ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದರಿಂದಾಗಿ ದೆಹಲಿಯಿಂದ ತೆರಳಬೇಕಿದ್ದ ಏರ್ ಇಂಡಿಯಾ, ಇಂಡಿಗೋ ಹಾಗೂ ನೇಪಾಳ ಏರ್‌ಲೈನ್ಸ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ಕಠ್ಮಂಡುವಿಗೆ ತೆರಳಿದ್ದ ಏರ್ ಇಂಡಿಯಾ ವಿಮಾನ, ನಿಲ್ದಾಣದ ಸಮೀಪ ಹೊಗೆ ಕಂಡುಬಂದ ಕಾರಣ ದೆಹಲಿಗೆ ವಾಪಸ್ ಆಗಿದೆ ಎಂದು ಮೂಲಗಳು ತಿಳಿಸಿವೆ.

air india

ದೆಹಲಿ ಮತ್ತು ಕಠ್ಮಂಡು ನಡುವೆ ದಿನಕ್ಕೆ ಆರು ಏರ್ ಇಂಡಿಯಾ ವಿಮಾನಗಳು ಸಂಚರಿಸುತ್ತವೆ. ಕಠ್ಮಂಡುವಿನಲ್ಲಿ ಪ್ರಸ್ತುತ ಇರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ-ಕಠ್ಮಂಡು ಮಾರ್ಗದಲ್ಲಿ ಕಾರ್ಯ ನಿರ್ವಹಿಸುವ ಎಐ 2231/2232, ಎಐ2219/2220, ಎಐ217/218, ಮತ್ತು ಎಐ211/212 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಏನಾದರೂ ಬದಲಾವಣೆಗಳಾದರೆ ಮಾಹಿತಿ ಹಂಚಿಕೊಳ್ಳು ವುದಾಗಿ ಏರ್ ಇಂಡಿಯಾ ಸಂಸ್ಥೆ ತಿಳಿಸಿದೆ.