Friday, September 11, 2026
Friday, September 11, 2026

ಪ್ರವಾಸೋದ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಶಸ್ತಿಗಳ ಆಯ್ಕೆಗೆ ಉದ್ಯಮ ಕ್ಷೇತ್ರದ ಹಿರಿಯರು, ವಿಷಯ ತಜ್ಞರು ಹಾಗೂ ಸಂಬಂಧಿತ ಪ್ರತಿನಿಧಿಗಳನ್ನು ಒಳಗೊಂಡ ಸ್ವತಂತ್ರ ಸ್ವೀನಿಂಗ್ ಸಮಿತಿ ಕಾರ್ಯನಿರ್ವಹಿಸಲಿದೆ. ಸೇವಾ ಗುಣಮಟ್ಟ, ಪ್ರವಾಸಿಗರ ಅಭಿಪ್ರಾಯ ಮತ್ತು ಅನುಭವ, ನಾವೀನ್ಯತೆ, ಪರಿಸರ ಸುಸ್ಥಿರತೆ ಹಾಗೂ ಸ್ಥಳೀಯ ಸಮುದಾಯದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ನಾಡುನಿರ್ದೇಶನಗಳನ್ನು ಮೌಲ್ಯ ಮಾಪನ ಮಾಡಲಾಗುವುದು.

ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಇತಿಹಾಸದಲ್ಲಿ ಮೊದಲ ಬಾರಿಗೆ, ಪ್ರವಾಸೋದ್ಯಮ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಸಂಸ್ಥೆಗಳು, ಉದ್ಯಮಿಗಳು ಹಾಗೂ ವ್ಯಕ್ತಿಗಳನ್ನು ರಾಜ್ಯಮಟ್ಟದ ವೇದಿಕೆಯಡಿ ಗುರುತಿಸಲು ಕರ್ನಾಟಕ ಟೂರಿಸಂ ಅವಾರ್ಡ್‌ 2026 ಆಯೋಜಿಸಲಾಗುತ್ತಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ರಾಜ್ಯ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಟೂರಿಸಂ ಸೊಸೈಟಿಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ಈ ಪ್ರಶಸ್ತಿಗಳು ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸೇವಾ ಗುಣಮಟ್ಟ, ನಾವೀನ್ಯತೆ, ಸುಸ್ಥಿರತೆ ಹಾಗೂ ಸ್ಥಳೀಯ ಸಮುದಾಯದ ಕೊಡುಗೆ ಗುರುತಿಸುವ ಪ್ರಮುಖ ವೇದಿಕೆಯಾಗಲಿದೆ. ರಾಜ್ಯದ ಒನ್ ಸ್ಟೇಟ್ ಒನ್ ವರ್ಲ್ಡ್ ಬ್ರಾಂಡ್ ಪರಿಕಲ್ಪನೆಯಡಿ ರೂಪಿಸಿರುವ ಪ್ರಶಸ್ತಿಗಳು ಕರ್ನಾಟಕದ 31 ಜಿಲ್ಲೆಗಳಲ್ಲಿರುವ ಪ್ರವಾಸೋದ್ಯಮ ಕ್ಷೇತ್ರದ ವೈವಿಧ್ಯಮಯ ಸಾಧನೆಗಳನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವ ಉದ್ದೇಶ ಹೊಂದಿದೆ ಎಂದರು.

ಇದನ್ನೂ ಓದಿ: ಯಾಳ ರಾಷ್ಟ್ರೀಯ ಉದ್ಯಾನವನದಲ್ಲಿ ತಾತ್ಕಾಲಿಕ ನಿರ್ಬಂಧ

ಕರ್ನಾಟಕ ಟೂರಿಸಂ ಸೊಸೈಟಿ ಅಧ್ಯಕ್ಷ ಕೆ. ಶ್ಯಾಮರಾಜು ಮಾತನಾಡಿ, ಪ್ರವಾಸ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿರುವವರಿಗೆ ಅರ್ಹತೆ ಆಧಾರಿತ, ವಿಶ್ವಾಸಾರ್ಹ ವೇದಿಕೆಯ ಮೂಲಕ ಮಾನ್ಯತೆ ನೀಡುವುದರ ಜತೆಗೆ ರಾಜ್ಯದಾದ್ಯಂತ ಸೇವಾ ಗುಣಮಟ್ಟವನ್ನು ಹೆಚ್ಚಿಸುವುದು ಈ ಉಪಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಪ್ರಶಸ್ತಿಗಳ ಆಯ್ಕೆಗೆ ಉದ್ಯಮ ಕ್ಷೇತ್ರದ ಹಿರಿಯರು, ವಿಷಯ ತಜ್ಞರು ಹಾಗೂ ಸಂಬಂಧಿತ ಪ್ರತಿನಿಧಿಗಳನ್ನು ಒಳಗೊಂಡ ಸ್ವತಂತ್ರ ಸ್ವೀನಿಂಗ್ ಸಮಿತಿ ಕಾರ್ಯನಿರ್ವಹಿಸಲಿದೆ. ಸೇವಾ ಗುಣಮಟ್ಟ, ಪ್ರವಾಸಿಗರ ಅಭಿಪ್ರಾಯ ಮತ್ತು ಅನುಭವ, ನಾವೀನ್ಯತೆ, ಪರಿಸರ ಸುಸ್ಥಿರತೆ ಹಾಗೂ ಸ್ಥಳೀಯ ಸಮುದಾಯದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ನಾಡುನಿರ್ದೇಶನಗಳನ್ನು ಮೌಲ್ಯ ಮಾಪನ ಮಾಡಲಾಗುವುದು. ಈ ಮೂಲಕ ಪ್ರಶಸ್ತಿ ಆಯ್ಕೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಮತ್ತು merit based recognition ಹೊಂದಲಾಗಿದೆ. ಅರ್ಹ ಹೊಟೇಲ್‌ಗಳು, ರೆಸಾರ್ಟ್‌ಗಳು, ಟೂರ್ ಅಪರೇಟರ್‌ಗಳು, ನೋಂದಾಯಿತ ಹೋಮ್‌ಸ್ಟೇಗಳು, ಪ್ರವಾಸ ಸೇವಾ ಸಂಸ್ಥೆಗಳು, ಪ್ರವಾಸೋದ್ಯಮ ಸ್ಪಾರ್ಟ್ ಅಪ್‌ಗಳು, ತಂತ್ರಜ್ಞಾನ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಸೆಪ್ಟೆಂಬರ್ 17, 2026ರ ರಾತ್ರಿ 11.49ರವರೆಗೆ ನಾಮನಿರ್ದೇಶನ ಸಲ್ಲಿಸಬಹುದು. ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಶ್ವ ಪ್ರವಾಸೋದ್ಯಮ ದಿನವಾದ ಸೆಪ್ಟೆಂಬರ್ 27ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..