Tuesday, July 21, 2026
Tuesday, July 21, 2026

ಬೆಂಗಳೂರು ಖಾಸಗಿ ಕಾರುಗಳ ರಾಜಧಾನಿ

ನಗರದಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಕಾರುಗಳು..

ಬೆಂಗಳೂರು ದೇಶದಲ್ಲೇ ಅತಿ ಹೆಚ್ಚು ಖಾಸಗಿ ಕಾರುಗಳನ್ನು ಹೊಂದಿರುವ ನಗರವಾಗಿ ಹೊರಹೊಮ್ಮಿದೆ. ನಗರದಲ್ಲಿ ನೋಂದಾಯಿತ ಖಾಸಗಿ ಕಾರುಗಳ ಸಂಖ್ಯೆ ಸುಮಾರು 25 ಲಕ್ಷಕ್ಕೆ ಏರಿಕೆಯಾಗಿದ್ದು, ಈ ಮೂಲಕ ದೆಹಲಿಯನ್ನೂ ಹಿಂದಿಕ್ಕಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಸುಮಾರು 1.2 ಕೋಟಿ ವಾಹನಗಳು ಸಂಚರಿಸುತ್ತಿದ್ದು, ಅವುಗಳಲ್ಲಿ ಸುಮಾರು 82 ಲಕ್ಷ ದ್ವಿಚಕ್ರ ವಾಹನಗಳು ಮತ್ತು 25 ಲಕ್ಷ ಖಾಸಗಿ ಕಾರುಗಳು ಸೇರಿವೆ.

Untitled design - 2026-07-20T180906.757

ನಗರದ ವಾಹನಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವುದು ಟ್ರಾಫಿಕ್ ದಟ್ಟಣೆ, ವಾಯುಮಾಲಿನ್ಯ ಹಾಗೂ ಪಾರ್ಕಿಂಗ್ ಸಮಸ್ಯೆಗಳನ್ನು ಮತ್ತಷ್ಟು ಗಂಭೀರಗೊಳಿಸಿದೆ. ಕಳೆದ ಕೆಲವು ವರ್ಷಗಳಿಂದ ಐಟಿ ಕ್ಷೇತ್ರದ ವಿಸ್ತರಣೆ, ಜನಸಂಖ್ಯೆ ಹೆಚ್ಚಳ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮಿತಿಗಳ ಕಾರಣ ಖಾಸಗಿ ವಾಹನಗಳ ಬಳಕೆ ವೇಗವಾಗಿ ಏರಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಮನಾಲಿ ಕೇ ಪಾಸ್ ಹೈ ...ರೋಥಾಂಗ್ ಪಾಸ್

ಸಾರಿಗೆ ತಜ್ಞರ ಪ್ರಕಾರ, ರಸ್ತೆಗಳನ್ನು ವಿಸ್ತರಿಸುವುದಕ್ಕಿಂತ ಮೆಟ್ರೋ ಜಾಲದ ವಿಸ್ತರಣೆ, ಬಿಎಂಟಿಸಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು, ಉಪನಗರ ರೈಲು ಸೇವೆಯನ್ನು ಶೀಘ್ರ ಪೂರ್ಣಗೊಳಿಸುವುದು ಮತ್ತು ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವುದು ಮಾತ್ರವೇ ದೀರ್ಘಕಾಲೀನ ಪರಿಹಾರವಾಗಿದೆ. ಇಲ್ಲವಾದರೆ ವಾಹನಗಳ ಸಂಖ್ಯೆ ಇನ್ನಷ್ಟು ಹೆಚ್ಚುತ್ತಾ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬಾರದ ಮಟ್ಟಿಗೆ ತಲುಪುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಕಲ್ಲಿನಲ್ಲಿ ಅರಳಿದ ಕಲಾಕುಸುಮ - ಪುಷ್ಕರಣಿ

Read Previous

ಕಲ್ಲಿನಲ್ಲಿ ಅರಳಿದ ಕಲಾಕುಸುಮ - ಪುಷ್ಕರಣಿ

ಮಕ್ಕಳ ಜೊತೆ ಬೆಂಗಳೂರಿನ ಈ ಸ್ಥಳಗಳಿಗೊಮ್ಮೆ ಭೇಟಿ ಕೊಟ್ಟು ನೋಡಿ, ನೀವೂ ಮಕ್ಕಳೇ ಆಗಿಬಿಡುತ್ತೀರಿ..

Read Next

ಮಕ್ಕಳ ಜೊತೆ ಬೆಂಗಳೂರಿನ ಈ ಸ್ಥಳಗಳಿಗೊಮ್ಮೆ ಭೇಟಿ ಕೊಟ್ಟು ನೋಡಿ, ನೀವೂ ಮಕ್ಕಳೇ ಆಗಿಬಿಡುತ್ತೀರಿ..