ಮಡಿಕೇರಿಯ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ತೀರ್ಥೋದ್ಭವದ ದಿನಾಂಕ ನಿಗದಿಯಾಗಿದ್ದು, ಅ.17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಆಗಲಿದೆ. ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡ ಲಿದ್ದಾಳೆ. ಸೆ.26ರ ಬೆಳಗ್ಗೆ 9.31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅ.4ರ ಬೆಳಗ್ಗೆ 8.33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ.14ರ ಬೆಳಗ್ಗೆ 11.45ಕ್ಕೆ ಧನುರ್‌ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುತ್ತದೆ. ಅ. 14ರ ಸಂಜೆ 4.45ಕ್ಕೆ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿ ಇರಿಸಲಾಗುತ್ತದೆ. ಅ.17ರ ಮಧ್ಯಾಹ್ನ 1.44 ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸಲಿದೆ ಎಂದು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮಾಹಿತಿ ನೀಡಿದೆ.