ಅರಾವಳಿ ಬೆಟ್ಟಗಳ ರಕ್ಷಣೆಗೆ ಕೇಂದ್ರ ಸರಕಾರ ಹೊಣೆ - ಭೂಪೇಂದ್ರ ಯಾದವ್
ಸುಪ್ರೀಂ ಕೋರ್ಟ್ ಸೂಚನೆಯ ಅನುಸಾರ ಅರಾವಳಿ ಪ್ರದೇಶದ ಭೌಗೋಳಿಕ ವ್ಯಾಪ್ತಿಗೆ ಸ್ಪಷ್ಟ ಚಿತ್ರಣ ನೀಡಲಾಗಿದ್ದು, ಇದರ ಉದ್ದೇಶ ಅಕ್ರಮ ಗಣಿಗಾರಿಕೆಯನ್ನು ತಡೆಯುವುದು ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಂರಕ್ಷಣಾ ಕ್ರಮಗಳನ್ನು ಜಾರಿಗೆ ತರುವುದಾಗಿದೆ. ಒಟ್ಟು ಅರಾವಳಿ ಪ್ರದೇಶದ 90 ಶೇಕಡಕ್ಕಿಂತ ಹೆಚ್ಚು ಭಾಗವನ್ನು ರಕ್ಷಿತ ವಲಯವಾಗಿ ಉಳಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಅರಾವಳಿ ಬೆಟ್ಟಗಳ ಸಂರಕ್ಷಣೆಗೆ ಕೇಂದ್ರ ಸರಕಾರ ಸಂಪೂರ್ಣ ಬದ್ಧವಾಗಿದ್ದು, ಈ ವಿಚಾರದಲ್ಲಿ ಯಾವುದೇ ರೀತಿಯ ಅನುಮಾನ ಬೇಡ ಎಂದು ಕೇಂದ್ರ ಪರಿಸರ, ಅರಣ್ಯ ಇಲಾಖೆ ಸಚಿವ ಭೂಪೇಂದ್ರ ಯಾದವ್ ಸ್ಪಷ್ಟಪಡಿಸಿದ್ದಾರೆ.
ಅರಾವಳಿ ಪ್ರದೇಶದಲ್ಲಿ ಅನಿಯಂತ್ರಿತ ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಈ ಊಹಾಪೋಹಗಳು ರಾಜಕೀಯ ಪ್ರೇರಿತ ಹಾಗೂ ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವೆಂದು ಹೇಳಿದರು. ಅರಾವಳಿ ಪರ್ವತ ಶ್ರೇಣಿಯ ಸಂರಕ್ಷಣೆ ಸರಕಾರದ ಪ್ರಮುಖ ಆದ್ಯತೆಯಾಗಿದ್ದು, ಪರಿಸರ ಸಮತೋಲನ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಸೂಚನೆಯ ಅನುಸಾರ ಅರಾವಳಿ ಪ್ರದೇಶದ ಭೌಗೋಳಿಕ ವ್ಯಾಪ್ತಿಗೆ ಸ್ಪಷ್ಟ ಚಿತ್ರಣ ನೀಡಲಾಗಿದ್ದು, ಇದರ ಉದ್ದೇಶ ಅಕ್ರಮ ಗಣಿಗಾರಿಕೆಯನ್ನು ತಡೆಯುವುದು ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಂರಕ್ಷಣಾ ಕ್ರಮಗಳನ್ನು ಜಾರಿಗೆ ತರುವುದಾಗಿದೆ. ಒಟ್ಟು ಅರಾವಳಿ ಪ್ರದೇಶದ 90 ಶೇಕಡಕ್ಕಿಂತ ಹೆಚ್ಚು ಭಾಗವನ್ನು ರಕ್ಷಿತ ವಲಯವಾಗಿ ಉಳಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ಹಂತದಲ್ಲಿ ಯಾವುದೇ ಹೊಸ ಗಣಿಗಾರಿಕೆಗೆ ಅನುಮತಿಯನ್ನು ನೀಡಲಾಗುವುದಿಲ್ಲ. ಅರಾವಳಿ ಸಂರಕ್ಷಣೆಗೆ ಸಂಬಂಧಿಸಿದಂತೆ ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಮೂಲಕ ಜಿಲ್ಲಾವಾರು ಸಂರಕ್ಷಣಾ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಅರಾವಳಿ ಬೆಟ್ಟಗಳು ಉತ್ತರ ಭಾರತದ ಪರಿಸರ ಸಮತೋಲನ, ಜಲಮೂಲಗಳ ಸಂರಕ್ಷಣೆ ಹಾಗೂ ಹವಾಮಾನ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಕಾರಣದಿಂದ ಅರಾವಳಿ ಪರ್ವತ ಶ್ರೇಣಿಯ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ದೀರ್ಘಕಾಲಿಕ ಹಾಗೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭೂಪೇಂದ್ರ ಯಾದವ್ ತಿಳಿಸಿದರು.