Friday, April 24, 2026
Friday, April 24, 2026

ಅಂಜನಾದ್ರಿ ಬೆಟ್ಟದ ದರ್ಶನ ಸಮಯದಲ್ಲಿ ಬದಲಾವಣೆ

ಉರಿಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸುರಕ್ಷತೆಗಾಗಿ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಅಂಜನಾದ್ರಿ ಬೆಟ್ಟದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭಕ್ತರು ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲ, ಹೊರ ರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ವಿಶೇಷವಾಗಿ ವಾರಾಂತ್ಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಉರಿಬಿಸಿಲಿನ ನಡುವೆಯೂ 575 ಮೆಟ್ಟಿಲುಗಳನ್ನು ಏರಿ ದರ್ಶನ ಪಡೆಯುವುದು ಅನೇಕ ಮಂದಿಗೆ ಸವಾಲಾಗುತ್ತಿದೆ. ಈ ನಿಟ್ಟಿನಲ್ಲಿ ಉರಿಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರ ಸುರಕ್ಷತೆಗಾಗಿ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಅಡಿಗಾಸ್‌ ಯಾತ್ರಾದಿಂದ ಅಮರನಾಥ ಯಾತ್ರೆ

ಮಧ್ಯಾಹ್ನದ ವೇಳೆ ಬೆಟ್ಟ ಏರುವುದರಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವುದನ್ನು ಗಮನಿಸಿ, ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬಿಸಿಲಿನ ತಾಪದಿಂದ ನಿರ್ಜಲೀಕರಣ, ಉಸಿರಾಟದ ತೊಂದರೆ ಬಿಸಿಲಿನ ತಾಪದಿಂದ ನಿರ್ಜಲೀಕರಣ, ಉಸಿರಾಟದ ತೊಂದರೆ, ದೌರ್ಬಲ್ಯ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಕ್ತರ ಆರೋಗ್ಯ ರಕ್ಷಣೆ ಮುಖ್ಯ ಉದ್ದೇಶವಾಗಿದ್ದು, ಯಾವುದೇ ಅಪಾಯವನ್ನು ತಪ್ಪಿಸುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಜಿಲ್ಲಾಡಳಿತದ ಈ ನಿರ್ಧಾರವನ್ನು ಭಕ್ತರು ಸ್ವಾಗತಿಸಿದ್ದು, ಬೆಟ್ಟದ ಮೇಲ್ಭಾಗದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲು ಹಾಗೂ ತುರ್ತು ಚಿಕಿತ್ಸೆ ಸೌಲಭ್ಯಗಳನ್ನು ಒದಗಿಸಲು ಮನವಿ ಮಾಡಿದ್ದಾರೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..