Monday, October 19, 2026
Monday, October 19, 2026

ಕೆಆರ್‌ಎಸ್‌ನ ಕಾವೇರಿ ಆರತಿಗೆ ಜಗಮಗದ ದೀಪಾಲಂಕಾರ

ಕಾವೇರಿ ಆರತಿಯು ಜಿಲ್ಲೆಯ ಜನರ ಭಾವನೆ, ನಂಬಿಕೆ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ನಿಕಟವಾಗಿ ಬೆಸೆದುಕೊಂಡಿರುವ ಮಹತ್ವದ ಕಾರ್ಯಕ್ರಮವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವುದರಿಂದ ಸುಗಮ ಸಂಚಾರಕ್ಕಾಗಿ ಸುಮಾರು 300 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಕೆ.ಆರ್.ಎಸ್ ಬೃಂದಾವನ ಉದ್ಯಾನವನದಲ್ಲಿ ಅ.16 ರಿಂದ 21 ರವರೆಗೆ ಕಳೆದ ವರ್ಷದಂತೆ 6 ದಿನಗಳ ಕಾಲ ಕಾವೇರಿ ಆರತಿ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ ನಿಯಮಿತ ಜಿಲ್ಲಾಡಳಿತದಿಂದ ನಾಡ ಹಬ್ಬ ದಸರಾ ನಿಮಿತ್ತ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಚಟವಟಿಕೆಗಳು ಜರುಗಲಿವೆ. ಮೊದಲದಿನ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಸಚಿವರಾದ ಚಲುವರಾ ಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಕೆ.ಜೆ. ಜಾರ್ಜ್, ಶಿವರಾಜ್ ಸಂಗಪ್ಪ ತಂಗಡಗಿ, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಸಿ.ಬಾಲ ಕೃಷ್ಣ, ಕೆ.ಎಸ್.ಬಸವಂತಪ್ಪ ಭಾಗವಹಿಸಿದ್ದರು.

ಕಾವೇರಿ ಆರತಿಯು ಜಿಲ್ಲೆಯ ಜನರ ಭಾವನೆ, ನಂಬಿಕೆ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ನಿಕಟವಾಗಿ ಬೆಸೆದುಕೊಂಡಿರುವ ಮಹತ್ವದ ಕಾರ್ಯಕ್ರಮವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವುದರಿಂದ ಸುಗಮ ಸಂಚಾರಕ್ಕಾಗಿ ಸುಮಾರು 300 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನದಿಂದಲೇ ಎರಡು ತಾತ್ಕಾಲಿಕ ಬಸ್ ನಿಲ್ದಾಣಗಳನ್ನು ಕಾರ್ಯಾರಂಭಗೊಳಿಸಿ, ಅಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸಾರ್ವಜನಿಕ ವಾಹನಗಳು ಮತ್ತು ಬಸ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ವಾಹನ ದಟ್ಟಣೆ ಉಂಟಾಗದಂತೆ ಸಂಚಾರ ಮಾರ್ಗಗಳನ್ನು ವ್ಯವಸ್ಥಿತವಾಗಿ ರೂಪಿಸುವ ಸಲುವಾಗಿ ಅಗತ್ಯವಿರುವ ಕಡೆ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಡಳಿತದಿಂದ ವ್ಯವಸ್ಥೆ ರೂಪಿಸಲಾಗಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..