Monday, July 20, 2026
Monday, July 20, 2026

ದೆಹಲಿ–ಕತ್ರಾ ಎಕ್ಸ್‌ಪ್ರೆಸ್‌ವೇ: ಪ್ರಯಾಣದ ಅವಧಿ ಕೇವಲ 6 ಗಂಟೆಗೆ ಇಳಿಕೆ

ದೆಹಲಿ–ಕತ್ರಾ ಎಕ್ಸ್‌ಪ್ರೆಸ್‌ವೇಯಿಂದಾಗಿ ಪ್ರಯಾಣದ ಅವಧಿ ಕೇವಲ 6 ಗಂಟೆಗೆ ಇಳಿಕೆಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ದೆಹಲಿ–ಅಮೃತಸರ–ಕತ್ರಾ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇಯ ಪ್ರಮುಖ ಭಾಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದು, ಇದರಿಂದ ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದ ಕತ್ರಾಕ್ಕೆ ಪ್ರಯಾಣದ ಸಮಯವು ಸುಮಾರು 14 ಗಂಟೆಯಿಂದ ಕೇವಲ 6 ಗಂಟೆಗೆ ಇಳಿಯಲಿದೆ. ಇದೇ ವೇಳೆ ದೆಹಲಿ–ಅಮೃತಸರ ನಡುವಿನ ಪ್ರಯಾಣವೂ ಸುಮಾರು 8 ಗಂಟೆಯಿಂದ 4 ಗಂಟೆಗೆ ಕಡಿಮೆಯಾಗಲಿದೆ.

Untitled design - 2026-07-20T115334.680

ಹರಿಯಾಣದ ಜಿಂದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 157.92 ಕಿಮೀ. ಉದ್ದದ ನಾಲ್ಕು ಪಥಗಳ ಎಕ್ಸ್‌ಪ್ರೆಸ್‌ವೇಯ ಮೊದಲ ಐದು ಪ್ಯಾಕೇಜ್‌ಗಳನ್ನು ಪ್ರಧಾನಿ ಉದ್ಘಾಟಿಸಿದರು. ಈ ಯೋಜನೆಯನ್ನು ಸುಮಾರು 9,680 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇ ರಾಷ್ಟ್ರೀಯ ರಾಜಧಾನಿಯನ್ನು ಪಂಜಾಬ್ ಹಾಗೂ ಜಮ್ಮು–ಕಾಶ್ಮೀರದೊಂದಿಗೆ ವೇಗವಾಗಿ ಸಂಪರ್ಕಿಸುವ ಮಹತ್ವದ ಮೂಲಸೌಕರ್ಯ ಯೋಜನೆಯಾಗಿದೆ.

ಈ ಯೋಜನೆಯಿಂದ ವೈಷ್ಣೋದೇವಿ ಯಾತ್ರಿಕರು, ಪ್ರವಾಸಿಗರು ಹಾಗೂ ಸರಕು ಸಾಗಣೆ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ರಸ್ತೆ ಪ್ರಯಾಣದ ಸಮಯ ಮತ್ತು ಇಂಧನ ವೆಚ್ಚ ಕಡಿಮೆಯಾಗುವುದರ ಜತೆಗೆ ಉತ್ತರ ಭಾರತದ ಪ್ರಮುಖ ನಗರಗಳ ನಡುವಿನ ಸಂಪರ್ಕವೂ ಮತ್ತಷ್ಟು ಬಲಗೊಳ್ಳಲಿದೆ. ಪ್ರವಾಸೋದ್ಯಮ, ವ್ಯಾಪಾರ ಮತ್ತು ಕೈಗಾರಿಕಾ ಬೆಳವಣಿಗೆಗೆ ಇದು ಹೊಸ ಉತ್ತೇಜನ ನೀಡಲಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಇದನ್ನೂ ಓದಿ: ಅದ್ಭುತ ಶಿಲ್ಪಕಲೆಯ ಮೋಧೇರಾ ಸೂರ್ಯ ಮಂದಿರ

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಜಲಂಧರ್‌ನಲ್ಲಿ ಎಕ್ಸ್‌ಪ್ರೆಸ್‌ವೇಯ ಮತ್ತೊಂದು ಪ್ಯಾಕೇಜ್‌, ರೈಲು ಹಾಗೂ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿ, ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ನವೀಕರಿಸಲಾದ ಹಲವು ರೈಲು ನಿಲ್ದಾಣಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಎಲ್ಲ ಯೋಜನೆಗಳು ದೇಶದ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಆಧುನೀಕರಿಸುವ ಉದ್ದೇಶ ಹೊಂದಿವೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!