ದೆಹಲಿಯಲ್ಲಿ ದಟ್ಟ ಮಂಜು: 100ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು
ಹವಾಮಾನ ಇಲಾಖೆಯು ದೆಹಲಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ʼಆರೆಂಜ್ ಅಲರ್ಟ್ʼ ಘೋಷಿಸಿದ್ದು, ಮುಂದಿನ ಎರಡು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.
ದೆಹಲಿಯಲ್ಲಿ ದಟ್ಟ ಮಂಜು ಆವರಿಸಿಕೊಂಡ ಹಿನ್ನೆಲೆಯಲ್ಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಮಂಜು ಆವರಿಸಿ ಏನೂ ಕಾಣದ ಕಾರಣದಿಂದ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು.
ಇನ್ನು ಈ ಕುರಿತು ಮಾಹಿತಿ ನೀಡಿದ ವಿಮಾನಯಾನ ಅಧಿಕಾರಿಗಳು ಶನಿವಾರ ಆವರಿಸಿದ ದಟ್ಟ ಮಂಜಿನಿಂದಾಗಿ ಸುಮಾರು 66 ಆಗಮನ ಮತ್ತು 63 ನಿರ್ಗಮನ ಸೇರಿದಂತೆ ಒಟ್ಟು 129 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಅಷ್ಟು ಮಾತ್ರವಲ್ಲದೆ 300ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವಿಳಂಬ ಉಂಟಾಗಿದೆ. ಕೆಲವು ವಿಮಾನಗಳನ್ನು ಹತ್ತಿರದ ಜೈಪುರ ಮತ್ತು ಇತರ ನಗರಗಳಿಗೆ ತಿರುಗಿಸಲಾಗಿದೆ ಎಂದು ಹೇಳಿದ್ದಾರೆ.
ಹವಾಮಾನ ಇಲಾಖೆಯು ದೆಹಲಿಯಲ್ಲಿ ದಟ್ಟ ಮಂಜಿನ ಹಿನ್ನೆಲೆಯಲ್ಲಿ ʼಆರೆಂಜ್ ಅಲರ್ಟ್ʼ ಘೋಷಿಸಿದ್ದು, ಮುಂದಿನ ಎರಡು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.