Monday, June 15, 2026
Monday, June 15, 2026

ಮಿಜೋರಾಂನಲ್ಲಿ ಟ್ರೈಬಲ್‌ ಪ್ರವಾಸೋದ್ಯಮ

ಮಿಜೋರಾಂ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವಿಶಿಷ್ಟ ಬುಡಕಟ್ಟು ಸಂಪ್ರದಾಯಗಳು ಮತ್ತು ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಐಟಿಡಿಸಿ ತನ್ನ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಅನುಭವವನ್ನು ಬಳಸಿಕೊಂಡು ಮಿಜೋರಾಂನ ಈ ಸಾಂಸ್ಕೃತಿಕ ವೈವಿಧ್ಯತೆಯನ್ನು 'ಬುಡಕಟ್ಟು ಪ್ರವಾಸೋದ್ಯಮ'ದ ರೂಪದಲ್ಲಿ ಉತ್ತೇಜಿಸಲಿದೆ.

ಈಶಾನ್ಯ ಭಾರತದ ಪ್ರವಾಸೋದ್ಯಮ ಬೆಳವಣಿಗೆಗೆ ಹೆಚ್ಚಿನ ವೇಗ ನೀಡುವ ನಿಟ್ಟಿನಲ್ಲಿ, ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ಮಿಜೋರಾಂ ಸರಕಾರ ಮಹತ್ವದ ಜಂಟಿ ಒಪ್ಪಂದಕ್ಕೆ ಸಹಿ ಹಾಕಿವೆ. ಮಿಜೋರಾಂ ರಾಜ್ಯದಲ್ಲಿ ಆತಿಥ್ಯ ಕ್ಷೇತ್ರದ ಕೌಶಲ್ಯಾಭಿವೃದ್ಧಿ , ಬುಡಕಟ್ಟು ಪ್ರವಾಸೋದ್ಯಮ ಮತ್ತು ಪರಿಸರ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವುದು ಈ ಜಂಟಿ ಮೈತ್ರಿಯ ಪ್ರಮುಖ ಉದ್ದೇಶವಾಗಿದೆ.

ಈ ಒಪ್ಪಂದದ ಅಡಿಯಲ್ಲಿ, ಐಟಿಡಿಸಿಯ ಪ್ರವಾಸೋದ್ಯಮ ಮತ್ತು ಆತಿಥ್ಯ ನಿರ್ವಹಣಾ ಸಂಸ್ಥೆಯು ಮಿಜೋರಾಂನ ಯುವ ಪೀಳಿಗೆಗೆ ಅಂತಾರಾಷ್ಟ್ರೀಯ ಮಟ್ಟದ ತರಬೇತಿಯನ್ನು ನೀಡಲಿದೆ. ಪ್ರವಾಸೋದ್ಯಮ ಉದ್ಯಮಕ್ಕೆ ಅಗತ್ಯವಿರುವ ವೃತ್ತಿಪರ ಕೌಶಲ್ಯಗಳನ್ನು ಸ್ಥಳೀಯ ಯುವಕರಲ್ಲಿ ಬೆಳೆಸುವ ಮೂಲಕ ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಗಣನೀಯವಾಗಿ ಹೆಚ್ಚಿಸುವುದು ಇದರ ಮುಖ್ಯ ಗುರಿಯಾಗಿದೆ.

ಇದನ್ನೂ ಓದಿ: ಪ್ರವಾಸ ಎಂದರೆ ಪ್ರದರ್ಶನವಲ್ಲ ಅನುಭವಿಸಿ ಪಡೆಯಬೇಕಾದ ಮನಸಿನ ಖುಷಿ

ಮಿಜೋರಾಂ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ವಿಶಿಷ್ಟ ಬುಡಕಟ್ಟು ಸಂಪ್ರದಾಯಗಳು ಮತ್ತು ನೈಸರ್ಗಿಕ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಐಟಿಡಿಸಿ ತನ್ನ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಅನುಭವವನ್ನು ಬಳಸಿಕೊಂಡು ಮಿಜೋರಾಂನ ಈ ಸಾಂಸ್ಕೃತಿಕ ವೈವಿಧ್ಯತೆಯನ್ನು 'ಬುಡಕಟ್ಟು ಪ್ರವಾಸೋದ್ಯಮ'ದ ರೂಪದಲ್ಲಿ ಉತ್ತೇಜಿಸಲಿದೆ. ಇದು ಪ್ರವಾಸಿಗರಿಗೆ ಹೊಸ ಅನುಭವವನ್ನು ನೀಡುವುದಲ್ಲದೆ, ಸ್ಥಳೀಯ ಬುಡಕಟ್ಟು ಸಮುದಾಯಗಳ ಆರ್ಥಿಕ ಸಬಲೀಕರಣಕ್ಕೂ ಕಾರಣವಾಗಲಿದೆ.

ರಾಜ್ಯದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರಕ್ಕೆ ಯಾವುದೇ ಧಕ್ಕೆ ಬಾರದಂತೆ ಸುಸ್ಥಿರ ಮತ್ತು ಪರಿಸರಸ್ನೇಹಿ ಪ್ರವಾಸಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಐಟಿಡಿಸಿ ತಾಂತ್ರಿಕ ಮತ್ತು ಸಲಹಾ ಬೆಂಬಲವನ್ನು ನೀಡಲಿದೆ. ಹೋಂಸ್ಟೇಗಳು, ರೆಸಾರ್ಟ್‌ಗಳು ಮತ್ತು ಪ್ರವಾಸಿ ಮಾಹಿತಿ ಕೇಂದ್ರಗಳನ್ನು ಆಧುನೀಕರಿಸಲು ಈ ಯೋಜನೆಯಡಿ ಒತ್ತು ನೀಡಲಾಗುತ್ತದೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ