ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ಸರಕಾರದ ಆದೇಶದ ಮೇರೆಗೆ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯ ಜವಾಬ್ದಾರಿಗಳ ಜತೆಗೆ, ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾಗಿ ಸಮವರ್ತಿ ಪ್ರಭಾರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಡಾ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ವಹಿಸಿಕೊಂಡ ನಂತರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.