ಕಬ್ಬನ್ ಪಾರ್ಕ್‌ನಲ್ಲಿ ʻಪುಷ್ಪ ಪ್ರದರ್ಶನʼ
ಈ ಬಾರಿಯ ಪ್ರದರ್ಶನವನ್ನು “ಮಕ್ಕಳ ಹಬ್ಬ” ಥೀಮ್ ನಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಆಕರ್ಷಣೆಯಾಗಿ ವೈವಿಧ್ಯಮಯ ಹೂವುಗಳಿಂದ ನಿರ್ಮಿಸಲಾದ ಹಂಪಿ ರಥವನ್ನು ತಯಾರಿಸಲಾಗುತ್ತಿದೆ. ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 8 ಗಂಟೆಯವರೆಗೆ ಪ್ರದರ್ಶನವನ್ನು ಸಾರ್ವಜನಿಕರಿಗೆ ಮುಕ್ತವಾಗಿರಲಿದೆ.
ಲಾಲ್ ಬಾಗ್ ಮಾದರಿಯಲ್ಲಿ ಕಬ್ಬನ್ ಪಾರ್ಕ್‌ನಲ್ಲೂ ವಿಶೇಷವಾದ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಇಲಾಖೆ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ನವೆಂಬರ್ 27ರಿಂದ ಡಿಸೆಂಬರ್ 7ರವರೆಗೆ ನಡೆಯಲಿರುವ ಈ ಪುಷ್ಟ ಪ್ರದರ್ಶನವನ್ನು ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದೆ.
ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಡಾ. ಎಂ. ಜಗದೀಶ್ ಮಾಧ್ಯಮದೊಂದಿಗೆ ಮಾತನಾಡಿ, ಈ ಬಾರಿಯ ಪ್ರದರ್ಶನವನ್ನು “ಮಕ್ಕಳ ಹಬ್ಬ” ಥೀಮ್ ನಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಆಕರ್ಷಣೆಯಾಗಿ ವೈವಿಧ್ಯಮಯ ಹೂವುಗಳಿಂದ ನಿರ್ಮಿಸಲಾದ ಹಂಪಿ ರಥವನ್ನು ತಯಾರಿಸಲಾಗುತ್ತಿದೆ. ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 8 ಗಂಟೆಯವರೆಗೆ ಪ್ರದರ್ಶನವನ್ನು ಸಾರ್ವಜನಿಕರಿಗೆ ಮುಕ್ತವಾಗಿರಲಿದೆ. ಮಕ್ಕಳನ್ನು ಆಕರ್ಷಿಸುವ ವಿವಿಧ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಹಾಗೂ ಮನರಂಜನಾ ಕಾರ್ಯಕ್ರಮಗಳು ಪ್ರತಿನಿತ್ಯ ನಡೆಯಲಿವೆ. 100 ಮಳಿಗೆಗಳು ಕಬ್ಬನ್ ಪಾರ್ಕ್ ಪುಷ್ಪ ಪ್ರದರ್ಶನದಲ್ಲಿ ಇರಲಿದ್ದು, ಬೀಜ, ಸಸಿಗಳು ಮಾರಾಟಕ್ಕೆ ಲಭ್ಯವಿರುವುದಾಗಿ ಅವರು ತಿಳಿಸಿದರು.