ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಆಫ್ರಿಕಾದಿಂದ ನಾಲ್ಕು ಚೀತಾಗಳು ಬೆಂಗಳೂರಿಗೆ ಆಗಮಿಸಿವೆ. ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಚೀತಾಗಳನ್ನು ಬರಮಾಡಿಕೊಂಡಿರುವ ಕುರಿತು ಎಕ್ಸ್ ಪೋಸ್ಟ್ ಮಾಡಿದ್ದಾರೆ.

"ಚೀತಾಗಳಿಗೆ ವಾತಾವರಣ ಮತ್ತು ಹವಾಮಾನ ಬದಲಾವಣೆಯಿಂದ ಯಾವುದೇ ತೊಂದರೆ ಆಗದಂತೆ, ವಿಶೇಷ ಕಾಳಜಿ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕ್ವಾರಂಟೈನ್ ವ್ಯವಸ್ಥೆ, 30 ದಿನಗಳ ನಿಯೋಜಿತ ಆಹಾರ, ಆರೋಗ್ಯ ಪರೀಕ್ಷೆಗಳು ಸೇರಿದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟ ಮೃಗಾಲಯಕ್ಕೆ ಸಾಗಿಸುವ ವ್ಯವಸ್ಥೆಯನ್ನೂ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.