Thursday, March 12, 2026
Thursday, March 12, 2026

ಗೋವಾ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿಗರಿಗೆ ಶಿಸ್ತಿನ ಪಾಠ

ಪ್ರವಾಸಿಗರು ಗೋವಾದ ಸಂಸ್ಕೃತಿ ಮತ್ತು ನೈಸರ್ಗಿಕ ಸೌಂದರ್ಯವನ್ನು ಗೌರವಿಸಬೇಕು ಹಾಗೂ ಸರಕಾರ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

ಗೋವಾ ಪ್ರವಾಸೋದ್ಯಮ ಇಲಾಖೆಯು ರಾಜ್ಯದ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಸುವ್ಯವಸ್ಥೆ ಮತ್ತು ಪ್ರವಾಸಿಗರ ಸುರಕ್ಷತೆಯನ್ನು ಕಾಪಾಡಲು ಅಶಿಸ್ತು ತೋರುವ ಪ್ರವಾಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಬುಧವಾರ (ಮಾರ್ಚ್ 11, 2026) ಈ ಆದೇಶ ಹೊರಡಿಸಲಾಗಿದ್ದು, ಗೋವಾ ಪ್ರವಾಸಿಗರು ಗಮನಿಸುವ ವಿಷಯಗಳನ್ನು ಹೇಳಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ನಿಷೇಧ: ಗೋವಾ ಕಡಲತೀರ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ದೊಡ್ಡ ಮಟ್ಟದ ದಂಡ ವಿಧಿಸಲಾಗುವುದು.

ಕಡಲತೀರದಲ್ಲಿ ಅಡುಗೆ ಮಾಡುವುದು: ಬೀಚ್‌ಗಳಲ್ಲಿ ಅಡುಗೆ ಮಾಡುವುದು ಅಥವಾ ತೆರೆದ ಸ್ಥಳಗಳಲ್ಲಿ ಆಹಾರ ತಯಾರಿಸುವುದು ಈಗ ಶಿಕ್ಷಾರ್ಹ ಅಪರಾಧ. ಇದು ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಕೈಗೊಂಡ ಕ್ರಮ ಎನ್ನಲಾಗಿದೆ.

ವಾಹನಗಳ ಚಾಲನೆ: ಕಡಲತೀರದ ಮರಳಿನ ಮೇಲೆ ದ್ವಿಚಕ್ರ ಅಥವಾ ನಾಲ್ಕು ಚಕ್ರದ ವಾಹನಗಳನ್ನು ಚಲಾಯಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದು ಪ್ರವಾಸಿಗರ ಸುರಕ್ಷತೆ ಮತ್ತು ಕಡಲತೀರದ ಪರಿಸರ ವ್ಯವಸ್ಥೆಯನ್ನು ರಕ್ಷಿಸುವ ಕಾರಣಕ್ಕೆ ಎನ್ನಲಾಗಿದೆ.

ಅಸಭ್ಯ ವರ್ತನೆ: ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುವ ಅಥವಾ ಸ್ಥಳೀಯರಿಗೆ ಹಾಗೂ ಇತರ ಪ್ರವಾಸಿಗರಿಗೆ ತೊಂದರೆ ನೀಡುವವರ ವಿರುದ್ಧ ತಕ್ಷಣದ ಕಾನೂನು ಕ್ರಮ ಜರುಗಿಸಲಾಗುವುದು.

ಕಾಲೇಜ್ ಸ್ಟ್ರೀಟ್ ಕಾಫಿಹೌಸ್

ದಂಡ ಮತ್ತು ಕಾನೂನು ಕ್ರಮ:

ಈ ಹೊಸ ನಿಯಮಗಳನ್ನು ಉಲ್ಲಂಘಿಸುವ ವ್ಯಕ್ತಿಗಳಿಗೆ 5000 ದಿಂದ50000 ವರೆಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಗಳಿಗಾಗಿ ಜೈಲು ಶಿಕ್ಷೆ ಅಥವಾ ಹೆಚ್ಚಿನ ದಂಡವನ್ನು ವಿಧಿಸಲು ಪ್ರವಾಸೋದ್ಯಮ ಇಲಾಖೆಯು ಪೊಲೀಸರಿಗೆ ಸೂಚನೆ ನೀಡಿದೆ.

ಗೋವಾ ಪ್ರವಾಸೋದ್ಯಮ ನಿರ್ದೇಶಕರು ಈ ಬಗ್ಗೆ, 'ಗೋವಾ ಕುಟುಂಬ ಸಮೇತ ಭೇಟಿ ನೀಡುವ ಸುರಕ್ಷಿತ ಪ್ರವಾಸಿ ತಾಣವಾಗಬೇಕು ಎಂಬುದು ನಮ್ಮ ಆಶಯ. ಕೆಲವೇ ಕೆಲವು ಜನರ ಬೇಜವಾಬ್ದಾರಿಯುತ ವರ್ತನೆಯಿಂದ ಇಡೀ ರಾಜ್ಯದ ಪ್ರವಾಸೋದ್ಯಮಕ್ಕೆ ಕೆಟ್ಟ ಹೆಸರು ಬರಬಾರದು" ಎಂದು ಹೇಳಿದ್ದಾರೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!