ರೆಕ್ಕೆ ಬಿಚ್ಚಲಿವೆ ಹೊಸ ವಿಮಾನಯಾನ ಸಂಸ್ಥೆಗಳು
ಮುಂದಿನ ವರ್ಷಾಂತ್ಯದ ವೇಳೆಗೆ ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಅನುಮೋದನೆ ಪಡೆದಿರುವ ಮೂರು ವಿಮಾನಯಾನ ಸಂಸ್ಥೆಗಳು ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ. ದೇಶೀಯ ಅಥವಾ ನಾಗರೀಕ ವಿಮಾನಯಾನ ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಉತ್ತೇಜಿಸಲು ಕೇಂದ್ರದ ನಾಗರಿಕ ವಿಮಾನಯಾನ ಸಚಿವಾಲಯ ಹೊಸದಾಗಿ ಆಲ್ ಹಿಂದ್ ಏರ್ ಹಾಗೂ ಫ್ಲೈ ಎಕ್ಸ್‌ಪ್ರೆಸ್ ಸಂಸ್ಥೆಗಳಿಗೆ ವಿಮಾನ ಕಾರ್ಯಾಚರಣೆ ಆರಂಭಿಸಲು ಅನುಮೋದನೆ ನೀಡಿದೆ.
ದೇಶದ ವಿಮಾನಯಾನ ಕ್ಷೇತ್ರದಲ್ಲಿ ಇಂಡಿಗೋದ ಪ್ರಾಬಲ್ಯ ತಗ್ಗಿಸಲು ಮುಂದಾಗಿರುವ ಕೇಂದ್ರ ಸರ್ಕಾರವು ಎರಡು ಹೊಸ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಗೆ ಆರಂಭಿಕ ಅನುಮೋದನೆ ನೀಡಿದೆ.
ಮುಂದಿನ ವರ್ಷಾಂತ್ಯದ ವೇಳೆಗೆ ದೇಶಿಯ ಮಾರುಕಟ್ಟೆಯಲ್ಲಿ ಈಗಾಗಲೇ ಅನುಮೋದನೆ ಪಡೆದಿರುವ ಮೂರು ವಿಮಾನಯಾನ ಸಂಸ್ಥೆಗಳು ವಾಣಿಜ್ಯ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆಯಿದೆ. ದೇಶೀಯ ಅಥವಾ ನಾಗರೀಕ ವಿಮಾನಯಾನ ಕ್ಷೇತ್ರದಲ್ಲಿ ಸ್ಪರ್ಧಾತ್ಮಕತೆ ಉತ್ತೇಜಿಸಲು ಕೇಂದ್ರದ ನಾಗರಿಕ ವಿಮಾನಯಾನ ಸಚಿವಾಲಯ ಹೊಸದಾಗಿ ಆಲ್ ಹಿಂದ್ ಏರ್ ಹಾಗೂ ಫ್ಲೈ ಎಕ್ಸ್‌ಪ್ರೆಸ್ ಸಂಸ್ಥೆಗಳಿಗೆ ವಿಮಾನ ಕಾರ್ಯಾಚರಣೆ ಆರಂಭಿಸಲು ಅನುಮೋದನೆ ನೀಡಿದೆ.
ಎರಡು ವಿಮಾನಯಾನ ಸಂಸ್ಥೆಗಳಿಗೆ NOC ಕೂಡ ನೀಡಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.