Tuesday, February 17, 2026
Tuesday, February 17, 2026

ಹಂಪಿ ಉತ್ಸವಕ್ಕೆ ದಿನಾಂಕ ನಿಗದಿ

ಹಂಪಿ ಉತ್ಸವ ನಾಡ ಹಬ್ಬವಿದ್ದಂತೆ. ಹಾಗಾಗಿ ಉತ್ಸವ ವಿಜೃಂಭಣೆಯಿಂದ ಜರುಗಬೇಕು. ಎಲ್ಲಾ ಸಿದ್ಧತೆಗಳ ತಯಾರಿ ನಡೆಸಲು ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ರಾಜ್ಯ-ಹೊರ ರಾಜ್ಯಗಳಿಂದ ಕಲಾವಿದರನ್ನು ಆಹ್ವಾನಿಸಲು ಚರ್ಚೆ ನೆಡೆಸಿ ಅಂತಿಮ ಪಟ್ಟಿ ಮಾಡಲಾಗುವುದು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ಇರುತ್ತದೆ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ.

ವಿಶ್ವವಿಖ್ಯಾತ ಹಂಪಿಯಲ್ಲಿ ಹಂಪಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ಜರುಗಲಿದೆ. ಈ ಕುರಿತು ಹಂಪಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಹಂಪಿ ಉತ್ಸವದ ಲಾಂಛನ ಬಿಡುಗಡೆ ಮಾಡಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಹಂಪಿ ಉತ್ಸವ ನಾಡ ಹಬ್ಬವಿದ್ದಂತೆ. ಹಾಗಾಗಿ ಉತ್ಸವ ವಿಜೃಂಭಣೆಯಿಂದ ಜರುಗಬೇಕು. ಎಲ್ಲಾ ಸಿದ್ಧತೆಗಳ ತಯಾರಿ ನಡೆಸಲು ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ರಾಜ್ಯ-ಹೊರ ರಾಜ್ಯಗಳಿಂದ ಕಲಾವಿದರನ್ನು ಆಹ್ವಾನಿಸಲು ಚರ್ಚೆ ನೆಡೆಸಿ ಅಂತಿಮ ಪಟ್ಟಿ ಮಾಡಲಾಗುವುದು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ಇರುತ್ತದೆ. ಕಳೆದ ಬಾರಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು. ವಿಮಾನ ಮಿಸ್ ಆಗಿದ್ದರಿಂದ ಅವರು ಬಂದಿರಲಿಲ್ಲ. ಈ ಬಾರಿಯೂ ಅವರನ್ನು ಆಹ್ವಾನಿಸುತ್ತಿದ್ದೇವೆ. ಸಾರ್ವಜನಿಕರ ಉಪಯೋಗಕ್ಕೆ ಸಾರಿಗೆ ಹಾಗೂ ಮೂಲಸೌಕರ್ಯಗಳ ಕುರಿತು ಗಮನಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಫೆಬ್ರವರಿ 13ರಂದು ಸಂಜೆ ಮುಖ್ಯಮಂತ್ರಿಗಳಿಂದ ಹಂಪಿ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಈ ಹಿಂದೆ ನವೆಂಬರ್‌ನಲ್ಲಿ ಹಂಪಿ ಉತ್ಸವ ನಡೆಯುತ್ತಿತ್ತು. ಕೋವಿಡ್ ಕಾರಣದಿಂದ ಕಳೆದ ವರ್ಷಗಳಿಂದ ಫೆಬ್ರವರಿಯಲ್ಲಿ ನಡೆಸಲಾಗುತ್ತಿದೆ. ಕಳೆದ ವರ್ಷ ಉತ್ಸವಕ್ಕೆ 16 ಕೋಟಿ ಅನುದಾನ ದೊರೆತಿತ್ತು. ಈ ಬಾರಿ 22 ಕೋಟಿ ರು. ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ.

Jadesha Emmiganur

Jadesha Emmiganur

Jadesha Emmiganur Is a Passionate Journalist from Ballari

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..