Monday, September 7, 2026
Monday, September 7, 2026

110 ಕಿಮೀ. ವೇಗದಲ್ಲಿ ಹೈಡ್ರೋಜನ್ ರೈಲು ಸಂಚಾರ

ಭಾರತೀಯ ರೈಲ್ವೇ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಗರಿಷ್ಠ ಗಂಟೆಗೆ 110 ಕಿಮೀ. ವೇಗದಲ್ಲಿ ಓಡಿಸುವ ಸಿದ್ಧತೆಯಲ್ಲಿ ತೊಡಗಿದೆ.

ಭಾರತೀಯ ರೈಲ್ವೇ ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಗರಿಷ್ಠ ಗಂಟೆಗೆ 110 ಕಿಮೀ. ವೇಗದಲ್ಲಿ ಓಡಿಸುವ ಸಿದ್ಧತೆಯಲ್ಲಿ ತೊಡಗಿದೆ. ರೈಲ್ವೇ ಮಂಡಳಿ ಅಧ್ಯಕ್ಷ ಹಾಗೂ ಸಿಇಒ ಸತೀಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಈಗಾಗಲೇ ಗಂಟೆಗೆ 120 ಕಿಮೀ. ವೇಗದಲ್ಲಿ ರೈಲಿನ ಪರೀಕ್ಷಾರ್ಥ ಸಂಚಾರ ಪೂರ್ಣಗೊಂಡಿದೆ. ಪ್ರಸ್ತುತ ಹೈಡ್ರೋಜನ್ ರೈಲಿನ ಕಾರ್ಯಾಚರಣಾ ವೇಗವನ್ನು ಗಂಟೆಗೆ 75 ಕಿಮೀ.ಗೆ ಮಿತಿಗೊಳಿಸಲಾಗಿದ್ದು, ಮುಂದಿನ ಹಂತದಲ್ಲಿ 110 ಕಿಮೀ. ವೇಗದಲ್ಲಿ ಸಂಚರಿಸುವ ಗುರಿ ಹೊಂದಲಾಗಿದೆ.

ಹೈಡ್ರೋಜನ್ ರೈಲಿಗೆ ಸೂಕ್ತ ಮಾರ್ಗಗಳನ್ನು ಗುರುತಿಸಲು ರೈಲ್ವೇ ಇಲಾಖೆ ವಿವಿಧ ಪಾಲುದಾರರೊಂದಿಗೆ ಚರ್ಚಿಸುತ್ತಿದೆ. ಹೈಡ್ರೋಜನ್ ಇಂಧನದ ನಿರಂತರ ಪೂರೈಕೆಗೆ ಅಗತ್ಯವಿರುವ ತಾಂತ್ರಿಕ ವ್ಯವಸ್ಥೆ ಮತ್ತು ಮೂಲಸೌಕರ್ಯಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಜುಲೈ 17ರಂದು ಹರಿಯಾಣದ 89 ಕಿಮೀ. ಉದ್ದದ ಜಿಂದ್–ಸೋನಿಪತ್ ಮಾರ್ಗದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲು ಆರಂಭಗೊಂಡಿತ್ತು. ಹೈಡ್ರೋಜನ್ ಮತ್ತು ಆಮ್ಲಜನಕದ ರಾಸಾಯನಿಕ ಕ್ರಿಯೆಯಿಂದ ವಿದ್ಯುತ್ ಉತ್ಪಾದಿಸುವ ಈ ರೈಲು ಹೊಗೆ ಹಾಗೂ ಟೇಲ್‌ಪೈಪ್ ಕಾರ್ಬನ್ ಹೊರಸೂಸುವಿಕೆ ಇಲ್ಲದ ಕಾರಣ ಡೀಸೆಲ್ ರೈಲುಗಳಿಗೆ ಪರಿಸರ ಸ್ನೇಹಿ ಪರ್ಯಾಯವೆಂದು ಪರಿಗಣಿಸಲಾಗಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!