Wednesday, February 4, 2026
Wednesday, February 4, 2026

ಭಾರತದಲ್ಲಿ ಸಾಹಸ ಪ್ರವಾಸೋದ್ಯಮ ಬಲಪಡಿಸಲು ಹೊಸ ರಾಷ್ಟ್ರೀಯ ನೀತಿ ಜಾರಿ

ಈ ತಂತ್ರಯೋಜನೆಯು ಸಾಹಸ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಪ್ರಮುಖ ಅಂಶವಾಗಿಸಿಕೊಂಡಿದ್ದು, ದೇಶಾದ್ಯಂತ ಒಂದೇ ಮಾದರಿಯ ಮಾನದಂಡಗಳನ್ನು ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸುವುದಕ್ಕೆ ಒತ್ತು ನೀಡಲಾಗಿದೆ. ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರಮುಖ ಸಾಹಸ ಪ್ರವಾಸೋದ್ಯಮ ತಾಣವಾಗಿ ರೂಪಿಸುವುದು ಇದರ ಮುಖ್ಯ ಗುರಿಯಾಗಿದೆ.

ಭಾರತದಲ್ಲಿ ಸಾಹಸ ಪ್ರವಾಸೋದ್ಯಮವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ತಂತ್ರಯೋಜನೆ (National Strategy for Adventure Tourism) ಹಾಗೂ ಸಮಗ್ರ ಸುರಕ್ಷತಾ ಕ್ರಮಗಳನ್ನು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಜಾರಿಗೆ ತಂದಿದೆ.

ಈ ತಂತ್ರಯೋಜನೆಯು ಸಾಹಸ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಪ್ರಮುಖ ಅಂಶವಾಗಿಸಿಕೊಂಡಿದ್ದು, ದೇಶಾದ್ಯಂತ ಒಂದೇ ಮಾದರಿಯ ಮಾನದಂಡಗಳನ್ನು ಮತ್ತು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸುವುದಕ್ಕೆ ಒತ್ತು ನೀಡಲಾಗಿದೆ. ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರಮುಖ ಸಾಹಸ ಪ್ರವಾಸೋದ್ಯಮ ತಾಣವಾಗಿ ರೂಪಿಸುವುದು ಇದರ ಮುಖ್ಯ ಗುರಿಯಾಗಿದೆ.

ಈ ನೀತಿಯ ಅನುಷ್ಠಾನಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಮನ್ವಯಿತ ಕಾರ್ಯಪದ್ದತಿಯನ್ನು ಅಳವಡಿಸಲಾಗಿದ್ದು, ನ್ಯಾಷನಲ್ ಬೋರ್ಡ್ ಫಾರ್ ಅಡ್ವೆಂಚರ್ ಟೂರಿಸಂ ಮೂಲಕ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತದೆ. ರಾಜ್ಯಗಳಿಗೆ ತಮ್ಮ ಭೌಗೋಳಿಕ ವೈಶಿಷ್ಟ್ಯಗಳಿಗೆ ಅನುಗುಣವಾಗಿ ಮಾದರಿ ಮಾರ್ಗಸೂಚಿಗಳನ್ನು ಜಾರಿಗೊಳಿಸುವ ಅವಕಾಶ ಕಲ್ಪಿಸಲಾಗಿದೆ.

Adventure Tourism Gets a Push with Uniform Safety Standards Across India

ಸಾಹಸ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವ ಸಂಸ್ಥೆಗಳು ಮತ್ತು ಸೇವೆಯನ್ನು ಒದಗಿಸುವವರು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಮತ್ತು ತರಬೇತಿ ಮಾನದಂಡಗಳನ್ನು ಪಾಲಿಸಬೇಕಾಗುತ್ತದೆ. ಇದರಿಂದ ಅಪಘಾತಗಳ ಸಾಧ್ಯತೆ ಕಡಿಮೆಯಾಗುವ ಜತೆಗೆ ಪ್ರವಾಸಿಗರಲ್ಲಿ ವಿಶ್ವಾಸ ಹೆಚ್ಚಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಪ್ರವಾಸೋದ್ಯಮದ ಭಾಗವಾಗಿ “ಲೀವ್ ನೋ ಟ್ರೇಸ್” ತತ್ವವನ್ನು ಅನುಸರಿಸುವಂತೆ ಪ್ರೋತ್ಸಾಹಿಸಲಾಗುತ್ತಿದ್ದು, ತ್ಯಾಜ್ಯ ನಿರ್ವಹಣೆ, ಸೂಕ್ಷ್ಮ ಪ್ರದೇಶಗಳ ರಕ್ಷಣೆ ಹಾಗೂ ಸ್ಥಳೀಯ ಸಮುದಾಯಗಳ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡಲಾಗಿದೆ.

ಈ ರಾಷ್ಟ್ರೀಯ ತಂತ್ರಯೋಜನೆಯಿಂದ ಸಾಹಸ ಪ್ರವಾಸೋದ್ಯಮ ವಲಯದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಪ್ರವಾಸಿಗರ ಸಂಖ್ಯೆಯಲ್ಲಿ ವೃದ್ಧಿ ಕಾಣುವ ನಿರೀಕ್ಷೆಯಿದ್ದು, ದೇಶದ ಆರ್ಥಿಕತೆಗೆ ಸಹಕಾರಿಯಾಗಲಿದೆ ಎಂದು ಸರಕಾರ ಅಭಿಪ್ರಾಯಪಟ್ಟಿದೆ.

Soumya

Soumya

I am Soumya Shindhe, an engineering graduate with a strong passion for literature and journalism. I have contributed interview articles to Chittara cine magazine and possess keen interest in writing, communication, and creative expression, aspiring to grow professionally.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!