Saturday, April 18, 2026
Saturday, April 18, 2026

ಭಾರತೀಯ ಸೇನೆಯ ಹೊಸ ಚಾಲೆಂಜ್

ಈ ಚಾಲೆಂಜ್‌ನ ಭಾಗವಾಗಿ ಚಾರಣ ಸೈಕ್ಲಿಂಗ್ ಮತ್ತು ಮೌಂಟೇನ್ ರೇಸಿಂಗ್‌ನಂತಹ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಇದು ದೇಶದ ವಿವಿಧ ಭಾಗಗಳಿಂದ ಸಾಹಸ ಪ್ರಿಯರನ್ನು ಉತ್ತರಾಖಂಡದತ್ತ ಆಕರ್ಷಿಸುತ್ತಿದೆ.

ಉತ್ತರಾಖಂಡದ ಸುಂದರ ಪರ್ವತ ಶ್ರೇಣಿಗಳಲ್ಲಿ ಸುಸ್ಥಿರ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಉದ್ದೇಶದಿಂದ ಭಾರತೀಯ ಸೇನೆಯು ಸೂರ್ಯ ದೇವಭೂಮಿ ಚಾಲೆಂಜ್ 2.0 ಅನ್ನು ಆಯೋಜಿಸಿದೆ.

ಈ ಚಾಲೆಂಜ್‌ನ ಭಾಗವಾಗಿ ಚಾರಣ ಸೈಕ್ಲಿಂಗ್ ಮತ್ತು ಮೌಂಟೇನ್ ರೇಸಿಂಗ್‌ನಂಥ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಇದು ದೇಶದ ವಿವಿಧ ಭಾಗಗಳಿಂದ ಸಾಹಸ ಪ್ರಿಯರನ್ನು ಉತ್ತರಾಖಂಡದತ್ತ ಆಕರ್ಷಿಸುತ್ತಿದೆ. ಸುರಕ್ಷಿತ ಮತ್ತು ಶಿಸ್ತುಬದ್ಧ ಸಾಹಸ ಪ್ರವಾಸೋದ್ಯಮವನ್ನು ಉತ್ತೇಜಿಸಲು ಭಾರತೀಯ ಸೇನೆಯು ಅಗತ್ಯ ಮಾರ್ಗದರ್ಶನ ಮತ್ತು ಸಹಕಾರವನ್ನು ನೀಡುತ್ತಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ 45ರಲ್ಲಿ ಕೆಂಪು ರಸ್ತೆ

ಭಾರತೀಯ ಸೇನೆಯ ಸೂರ್ಯ ಕಮಾಂಡ್ ವತಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಹಿಮಾಲಯದ ಸೂಕ್ಷ್ಮ ಪರಿಸರ ವ್ಯವಸ್ಥೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತದೆ. ಉತ್ತರಾಖಂಡದ ಗಡಿ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವುದು ಮತ್ತು ಅದೇ ಸಮಯದಲ್ಲಿ ಪ್ರಕೃತಿಯನ್ನು ಸಂರಕ್ಷಿಸುವುದು ಈ ಸವಾಲಿನ ಪ್ರಮುಖ ಆಶಯವಾಗಿದೆ. ಇದು ಕೇವಲ ಸಾಹಸ ಚಟುವಟಿಕೆಯಾಗಿರದೆ, ಗಡಿ ಗ್ರಾಮಗಳ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾದ ಕಾರ್ಯಕ್ರಮವಾಗಿದೆ.

ಹಿಮಾಲಯದ ಬೆಟ್ಟಗಳಲ್ಲಿ ಹೆಚ್ಚುತ್ತಿರುವ ಪ್ರವಾಸಿಗರ ದಟ್ಟಣೆಯಿಂದಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ಈ ಅಭಿಯಾನವು ಒತ್ತು ನೀಡುತ್ತದೆ. ಪ್ಲಾಸ್ಟಿಕ್ ಮುಕ್ತ ಪ್ರಯಾಣ, ತ್ಯಾಜ್ಯ ನಿರ್ವಹಣೆ ಮತ್ತು ಸ್ಥಳೀಯ ಸಸ್ಯಸಂಕುಲದ ರಕ್ಷಣೆಯ ಬಗ್ಗೆ ಪ್ರವಾಸಿಗರಲ್ಲಿ ಮತ್ತು ಸ್ಥಳೀಯರಲ್ಲಿ ಅರಿವು ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಬೆಟ್ಟದ ಪ್ರದೇಶಗಳಲ್ಲಿರುವ ಪುರಾತನ ಸ್ಮಾರಕಗಳು, ದೇವಾಲಯಗಳು ಮತ್ತು ಸಾಂಪ್ರದಾಯಿಕ ಜೀವನಶೈಲಿಯನ್ನು ಜಾಗತಿಕ ಮಟ್ಟದಲ್ಲಿ ಬಿಂಬಿಸಲಾಗುತ್ತಿದೆ. ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಮೂಲಕ ಯುವ ಪೀಳಿಗೆಗೆ ತಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಕೆಲಸವನ್ನು ಸೇನೆ ಮಾಡುತ್ತಿದೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!