ಜಾರ್ಖಂಡ್ ವಿಧಾನಸಭೆಯಲ್ಲಿ ಪ್ರವಾಸೋದ್ಯಮ ಸಂಬಂಧಿತ ಬಿಲ್ ಪಾಸ್
ಈ ಸಂಸ್ಥೆಯ ಅಧ್ಯಕ್ಷರನ್ನಾಗಿ ಪ್ರತಿ ಜಿಲ್ಲೆಯ ಡಿಸ್ಟ್ರಿಕ್ಟ್ ಕಮಿಷನರ್‌ರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. JTAA ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳ ಸ್ವಚ್ಛತೆಯನ್ನು ಕಾಪಾಡುವುದು, ಭದ್ರತೆಯನ್ನು ಒದಗಿಸುವುದು, ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವತ್ತ ಗಮನ ಹರಿಸಲಾಗುವುದೆಂದು ಸರಕಾರ ತಿಳಿಸಿದೆ.
ಜಾರ್ಖಂಡ್ ವಿಧಾನಸಭೆಯಲ್ಲಿ ರಾಜ್ಯದ ಪ್ರವಾಸೋದ್ಯಮಕ್ಕೆ ಸಂಬಂಧಿತ “Jharkhand Tourism Development and Registration (Amendment) Bill 2025” ಎಂಬ ಬಿಲ್, ಧ್ವನಿಮತದ ಮುಖಾಂತರ ಅಂಗೀಕಾರವಾಗಿದೆ. ಈ ಬಿಲ್ ಮೂಲಕ, ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಗೆ ಬಾರದ ಪ್ರಮುಖ ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು, Jharkhand Tourism Area Authority (JTAA) ಎಂಬ ಹೊಸ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಈ ಸಂಸ್ಥೆಯ ಅಧ್ಯಕ್ಷರನ್ನಾಗಿ ಪ್ರತಿ ಜಿಲ್ಲೆಯ ಡಿಸ್ಟ್ರಿಕ್ಟ್ ಕಮಿಷನರ್‌ರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ. JTAA ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳ ಸ್ವಚ್ಛತೆಯನ್ನು ಕಾಪಾಡುವುದು, ಭದ್ರತೆಯನ್ನು ಒದಗಿಸುವುದು, ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸುವತ್ತ ಗಮನ ಹರಿಸಲಾಗುವುದೆಂದು ಸರಕಾರ ತಿಳಿಸಿದೆ.
ರಾಜ್ಯದ ʼಗ್ರೇಡ್-Aʼ ಪ್ರವಾಸಿ ತಾಣಗಳಾದ ಪತ್ರಾಟು, ನೇತಾರ್‌ಹಟ್, ರಾಜ್‌ರಪ್ಪಾ ಮತ್ತು ಮಧುಬನ ಸೇರಿದಂತೆ ಅನೇಕ ಸ್ಥಳಗಳನ್ನು JTAA ವ್ಯಾಪ್ತಿಗೆ ಸೇರಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ.