ಟೂರಿಸ್ಟ್ ಗೈಡ್‌ಗಳಿಗೆ ಲೈಸನ್ಸ್ ಕಡ್ಡಾಯ
ಪ್ರಸ್ತಾವಿತ ಯೋಜನೆಯಂತೆ, ಟೂರಿಸ್ಟ್ ಗೈಡ್‌ಗಳಿಗೆ ತರಬೇತಿ ನೀಡಿದ ನಂತರ ಲೈಸೆನ್ಸ್ ನೀಡಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 21 ರಿಂದ 45 ವರ್ಷ ವಯಸ್ಸಿನೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 48 ವರ್ಷದವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯ ಪ್ರವಾಸಿ ಮಾರ್ಗದರ್ಶಿಗಳಿಗೆ ಕನಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಕಡ್ಡಾಯವಾಗಿದ್ದು, ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುವ ಗೈಡ್‌ಗಳಿಗೆ ಪದವಿ ಹೊಂದಿರುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಟೂರಿಸ್ಟ್ ಗೈಡ್‌ಗಳ ಸೇವೆಯನ್ನು ನಿಯಂತ್ರಿಸುವುದರ ಜತೆಗೆ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರಕಾರ ಹೊಸ ಲೈಸೆನ್ಸ್ ವ್ಯವಸ್ಥೆ ಜಾರಿಗೆ ತರಲು ಯೋಜನೆ ರೂಪಿಸಿದೆ. ಈ ಮೂಲಕ ಟೂರಿಸ್ಟ್ ಗೈಡ್‌ಗಳಿಗೆ ಅಧಿಕೃತ ಮಾನ್ಯತೆ, ತರಬೇತಿ ಹಾಗೂ ನಿಯಮಿತ ವ್ಯವಸ್ಥೆ ಕಲ್ಪಿಸಲು ಸರಕಾರ ಮುಂದಾಗಿದೆ.
ಪ್ರಸ್ತುತ ರಾಜ್ಯದಲ್ಲಿ 421 ನೋಂದಾಯಿತ ಟೂರಿಸ್ಟ್ ಗೈಡ್‌ಗಳಿದ್ದು, ಅನೇಕರು ಯಾವುದೇ ಅಧಿಕೃತ ಅನುಮತಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಪ್ರವಾಸಿಗರಿಗೆ ಸಮರ್ಪಕ ಮಾಹಿತಿ ದೊರಕದೆ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಗೈಡ್‌ಗಳ ಸೇವೆಯನ್ನು ಏಕರೂಪಗೊಳಿಸುವ ಅಗತ್ಯವಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಭಿಪ್ರಾಯಪಟ್ಟಿದೆ.
ಪ್ರಸ್ತಾವಿತ ಯೋಜನೆಯಂತೆ, ಟೂರಿಸ್ಟ್ ಗೈಡ್‌ಗಳಿಗೆ ತರಬೇತಿ ನೀಡಿದ ನಂತರ ಲೈಸೆನ್ಸ್ ನೀಡಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 21 ರಿಂದ 45 ವರ್ಷ ವಯಸ್ಸಿನೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 48 ವರ್ಷದವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯ ಪ್ರವಾಸಿ ಮಾರ್ಗದರ್ಶಿಗಳಿಗೆ ಕನಿಷ್ಠ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಕಡ್ಡಾಯವಾಗಿದ್ದು, ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುವ ಗೈಡ್‌ಗಳಿಗೆ ಪದವಿ ಹೊಂದಿರುವುದು ಕಡ್ಡಾಯವಾಗಿದೆ.

ತರಬೇತಿ ಅವಧಿಯಲ್ಲಿ ಇತಿಹಾಸ, ಸಂಸ್ಕೃತಿ, ಪ್ರವಾಸಿ ಸ್ಥಳಗಳ ಮಾಹಿತಿ, ಫಂಕ್ಷನಲ್ ಇಂಗ್ಲಿಷ್ ಹಾಗೂ ಒಂದು ವಿದೇಶಿ ಭಾಷೆಯ ತರಬೇತಿ ನೀಡಲಾಗುತ್ತದೆ. ಇದರಿಂದ ದೇಶಿ ಮತ್ತು ವಿದೇಶಿ ಪ್ರವಾಸಿಗರಿಗೆ ಉತ್ತಮ ಅನುಭವ ಒದಗಿಸುವುದು ಸರಕಾರದ ಉದ್ದೇಶವಾಗಿದೆ.
ಪ್ರವಾಸೋದ್ಯಮ ಇಲಾಖೆಯ ಪ್ರಕಾರ, ಕೆಲವು ಪ್ರವಾಸಿ ಕೇಂದ್ರಗಳಲ್ಲಿ ಭಾಷಾ ಅಡೆತಡೆ ನಿವಾರಣೆಗೆ ಬಹುಭಾಷಾ ಅನುವಾದ ಸಾಧನಗಳು, ಎಆರ್/ವಿಆರ್ ತಂತ್ರಜ್ಞಾನ ಬಳಕೆಯನ್ನೂ ಪರಿಶೀಲಿಸಲಾಗುತ್ತಿದೆ. ಅಗತ್ಯವಿರುವ ಸ್ಥಳಗಳಲ್ಲಿ ತಂತ್ರಜ್ಞಾನ ಆಧಾರಿತ ಮಾರ್ಗದರ್ಶನ ವ್ಯವಸ್ಥೆಗಳನ್ನು ಅಳವಡಿಸುವ ಕುರಿತು ಚಿಂತನೆ ನಡೆದಿದೆ.
ಈ ಲೈಸೆನ್ಸ್ ವ್ಯವಸ್ಥೆ ಜಾರಿಯಿಂದ ಟೂರಿಸ್ಟ್ ಗೈಡಗಳ ಸೇವೆಯು ಹೆಚ್ಚು ವೃತ್ತಿಪರವಾಗಲಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಶಿಸ್ತು, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಹೆಚ್ಚಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.