ಕಾಶ್ಮೀರದ ಸ್ಯಾಗ್ ಇಕೋ ವಿಲೇಜ್‌ಗೆ ಗೋಲ್ಡ್ ಪ್ರಶಸ್ತಿ
ವನ್ಯಜೀವಿ ಸಂರಕ್ಷಣೆ, ಪ್ರಕೃತಿ ಆಧಾರಿತ ಪ್ರವಾಸೋದ್ಯಮ ಹಾಗೂ ಸ್ಥಳೀಯ ಸಮುದಾಯದ ಸಕ್ರಿಯ ಭಾಗವಹಿಸುವಿಕೆಯನ್ನು ಕೇಂದ್ರವಾಗಿರಿಸಿಕೊಂಡು ಸ್ಯಾಗ್ ಎಕೋ ವಿಲೇಜ್ ಕಾರ್ಯನಿರ್ವಹಿಸುತ್ತಿದೆ. ಪರಿಸರ ಸಂರಕ್ಷಣೆಗೆ ಒತ್ತು ನೀಡುವ ವಸತಿ ವ್ಯವಸ್ಥೆ, ಸ್ಥಳೀಯ ಸಂಸ್ಕೃತಿ ಸಂರಕ್ಷಣೆ ಮತ್ತು ಉತ್ತಮ ಜೀವನಶೈಲಿಯನ್ನು ಉತ್ತೇಜಿಸುವ ಮಾದರಿಯೇ ಈ ಪ್ರಶಸ್ತಿಗೆ ಕಾರಣವಾಗಿದೆ.
ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಸ್ಯಾಗ್ ಇಕೋ ವಿಲೇಜ್ (Sagg Eco Village), ಪ್ರತಿಷ್ಠಿತ TOFT Wildlife & Nature Tourism Awards 2025ರಲ್ಲಿ ಗೋಲ್ಡ್ ಪ್ರಶಸ್ತಿಯನ್ನು ಪಡೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಪರಿಸರ ಸ್ನೇಹಿ ಪ್ರವಾಸೋದ್ಯಮ ಮತ್ತು ಸುಸ್ಥಿರ ಅಭಿವೃದ್ಧಿ ಕ್ಷೇತ್ರದಲ್ಲಿ ನೀಡಿರುವ ಮಹತ್ವದ ಕೊಡುಗೆಗಾಗಿ ಈ ಗೌರವ ಲಭಿಸಿದೆ.

ವನ್ಯಜೀವಿ ಸಂರಕ್ಷಣೆ, ಪ್ರಕೃತಿ ಆಧಾರಿತ ಪ್ರವಾಸೋದ್ಯಮ ಹಾಗೂ ಸ್ಥಳೀಯ ಸಮುದಾಯದ ಸಕ್ರಿಯ ಭಾಗವಹಿಸುವಿಕೆಯನ್ನು ಕೇಂದ್ರವಾಗಿರಿಸಿಕೊಂಡು ಸ್ಯಾಗ್ ಇಕೋ ವಿಲೇಜ್ ಕಾರ್ಯನಿರ್ವಹಿಸುತ್ತಿದೆ. ಪರಿಸರ ಸಂರಕ್ಷಣೆಗೆ ಒತ್ತು ನೀಡುವ ವಸತಿ ವ್ಯವಸ್ಥೆ, ಸ್ಥಳೀಯ ಸಂಸ್ಕೃತಿ ಸಂರಕ್ಷಣೆ ಮತ್ತು ಉತ್ತಮ ಜೀವನಶೈಲಿಯನ್ನು ಉತ್ತೇಜಿಸುವ ಮಾದರಿಯೇ ಈ ಪ್ರಶಸ್ತಿಗೆ ಕಾರಣವಾಗಿದೆ.
ʼTOFT Wildlife & Nature Tourism Awardsʼ ಅನ್ನು ಜವಾಬ್ದಾರಿಯುತ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ನೀಡಲಾಗುತ್ತದೆ. ಈ ಪ್ರಶಸ್ತಿ ಲಭಿಸಿರುವುದು ಕಾಶ್ಮೀರದಲ್ಲಿ ಸುಸ್ಥಿರ ಪ್ರವಾಸೋದ್ಯಮಕ್ಕೆ ಉತ್ತಮವಾದ ಭವಿಷ್ಯವಿದೆ ಎಂಬುದನ್ನು ಸೂಚಿಸುತ್ತದೆ ಎಂದು ಪ್ರವಾಸೋದ್ಯಮ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.