ಪ್ರವಾಸೋದ್ಯಮ ಕೇಂದ್ರವಾಗಲಿದೆ ಕೊಕ್ಕರೆ ಬೆಳ್ಳೂರು
ಕೊಕ್ಕರೆ ಬೆಳ್ಳೂರು ಇತಿಹಾಸ ಪ್ರಸಿದ್ಧವಾದ ಪಕ್ಷಿಧಾಮ ತಾಣವಾಗಿದೆ. ದೇಶ ವಿದೇಶಗಳಿಂದ ಇಲ್ಲಿಗೆ ಪಕ್ಷಿಗಳು ವಲಸೆ ಬಂದು ವಾಸಿಸುತ್ತವೆ. ಇದನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಕೊರತೆ ಮತ್ತಿತರೆ ಸಮಸ್ಯೆಗಳಿಂದ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿದೆ.
ಮದ್ದೂರು ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆಸಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮಂಡ್ಯ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಕ್ಕರೆ ಬೆಳ್ಳೂರು ಇತಿಹಾಸ ಪ್ರಸಿದ್ಧವಾದ ಪಕ್ಷಿಧಾಮ ತಾಣವಾಗಿದೆ. ದೇಶ ವಿದೇಶಗಳಿಂದ ಇಲ್ಲಿಗೆ ಪಕ್ಷಿಗಳು ವಲಸೆ ಬಂದು ವಾಸಿಸುತ್ತವೆ. ಇದನ್ನು ನೋಡಲು ಪ್ರವಾಸಿಗರ ದಂಡೇ ಬರುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಕೊರತೆ ಮತ್ತಿತರೆ ಸಮಸ್ಯೆಗಳಿಂದ ಪಕ್ಷಿಗಳ ಸಂಖ್ಯೆ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಅವುಗಳಿಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ತಾಣವನ್ನಾಗಿ ಮಾಡಲಾಗುವುದು. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.