ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್ ಸೌಲಭ್ಯ: ಕೆಎಸ್‌ಆರ್‌ಸಿಟಿಸಿ
ಈ ಹೆಚ್ಚುವರಿ ಬಸ್‌ಗಳು ಬೆಂಗಳೂರಿನ ಕೇಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ನಗರಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಸಂಚರಿಸಲಿವೆ. ಹೊರರಾಜ್ಯಗಳಾದ ತಿರುಪತಿ, ವಿಜಯವಾಡಾ ಮತ್ತು ಹೈದರಾಬಾದ್ ಕಡೆಗೂ ಬಸ್‌ಗಳು ಸಂಚರಿಸಲಿವೆ.
ಕ್ರಿಸ್‌ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 1,000 ಹೆಚ್ಚುವರಿ ಬಸ್‌ಗಳ ಸೌಲಭ್ಯ ಕಲ್ಪಿಸಿದೆ.
ನಿಗಮದ ಮಾಹಿತಿ ಪ್ರಕಾರ, ಡಿಸೆಂಬರ್ 19, 20 ಮತ್ತು 24ರಂದು ಪ್ರಯಾಣ ಆರಂಭಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೇವೆಯನ್ನು ಒದಗಿಸಲಾಗುತ್ತಿದ್ದು, ಹಬ್ಬದ ನಂತರ ಡಿಸೆಂಬರ್ 26 ಮತ್ತು 28ರಂದು ಹಿಂತಿರುಗುವ ಪ್ರಯಾಣಿಕರಿಗೆ ವಿಶೇಷ ಸೇವೆಗಳು ಲಭ್ಯವಿರುತ್ತವೆ.

ಈ ಹೆಚ್ಚುವರಿ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ನಗರಗಳು ಮತ್ತು ಧಾರ್ಮಿಕ ಕ್ಷೇತ್ರಗಳಿಗೆ ಸಂಚರಿಸಲಿವೆ. ಹೊರರಾಜ್ಯಗಳಾದ ತಿರುಪತಿ, ವಿಜಯವಾಡಾ ಮತ್ತು ಹೈದರಾಬಾದ್ ಕಡೆಗೂ ಬಸ್‌ಗಳು ಸಂಚರಿಸಲಿವೆ.
ಇದಲ್ಲದೆ, ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ.
ಪ್ರಯಾಣಿಕರು ಈ ವಿಶೇಷ ಬಸ್‌ಗಳ ಟಿಕೆಟ್‌ಗಳನ್ನು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್ ಮೂಲಕ ಮುಂಗಡವಾಗಿ ಬುಕ್ ಮಾಡಬಹುದಾಗಿದೆ. ಪ್ರಯಾಣದ ವೇಳೆ ಯಾವುದೇ ತೊಂದರೆ ಉಂಟಾಗದಂತೆ ತಡೆಯಲು ಟಿಕೆಟ್‌ನಲ್ಲಿ ಉಲ್ಲೇಖಿಸಿರುವ ಬೋರ್ಡಿಂಗ್ ಪಾಯಿಂಟ್‌ಗಳನ್ನು ಪರಿಶೀಲಿಸುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.