Thursday, January 1, 2026
Thursday, January 1, 2026

ಲಖನೌ: ಪ್ರವಾಸೋದ್ಯಮ ಉತ್ತೇಜನಕ್ಕೆ ಹೊಸ ಯೋಜನೆಗಳು

ರಾಜ್ಯ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಯವೀರ್ ಸಿಂಗ್ ಅವರ ಮಾಹಿತಿ ಪ್ರಕಾರ, ಶಹೀದ್ ಪಾತ್ ಪ್ರದೇಶದಲ್ಲಿ ಸಮಗ್ರ ಸಂಸ್ಕೃತಿ ಕಾಂಪ್ಲೆಕ್ಸ್ ನಿರ್ಮಾಣವಾಗಲಿದೆ. ಈ ಕಾಂಪ್ಲೆಕ್ಸ್‌ನಲ್ಲಿ ವಿವಿಧ ಸಾಂಸ್ಕೃತಿಕ ಇಲಾಖೆ, ಸಂಸ್ಥೆಗಳು ಮತ್ತು ಅಕಾಡೆಮಿಗಳು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸಲಿದ್ದು, ಲಖನೌ ನಗರದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಜನರಿಗೆ ಪರಿಚಯಿಸುವ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

ಲಖನೌ ನಗರದಲ್ಲಿ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ರಾಜ್ಯ ಸರಕಾರರ ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹೊಸ ಸಂಸ್ಕೃತಿ ಕಾಂಪ್ಲೆಕ್ಸ್ ನಿರ್ಮಾಣ ಹಾಗೂ ಹೆರಿಟೇಜ್ ಬಸ್ ಸೇವೆ ಆರಂಭಿಸಲು ತೀರ್ಮಾನಿಸಲಾಗಿದೆ.

ರಾಜ್ಯ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಯವೀರ್ ಸಿಂಗ್ ಅವರ ಮಾಹಿತಿ ಪ್ರಕಾರ, ಶಹೀದ್ ಪಾತ್ ಪ್ರದೇಶದಲ್ಲಿ ಸಮಗ್ರ ಸಂಸ್ಕೃತಿ ಕಾಂಪ್ಲೆಕ್ಸ್ ನಿರ್ಮಾಣವಾಗಲಿದೆ. ಈ ಕಾಂಪ್ಲೆಕ್ಸ್‌ನಲ್ಲಿ ವಿವಿಧ ಸಾಂಸ್ಕೃತಿಕ ಇಲಾಖೆ, ಸಂಸ್ಥೆಗಳು ಮತ್ತು ಅಕಾಡೆಮಿಗಳು ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸಲಿದ್ದು, ಲಖನೌ ನಗರದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಜನರಿಗೆ ಪರಿಚಯಿಸುವ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.

Lucknow Set for Tourism Boost with New Culture Complex and Heritage Bus Service

ಇದೇ ಸಂದರ್ಭದಲ್ಲಿ ಭಟಖಂಡೆ ಸಾಂಸ್ಕೃತಿಕ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಸಂಗೀತ ಮತ್ತು ಸಾಂಸ್ಕೃತಿಕ ಶಿಕ್ಷಣಕ್ಕೆ ಉತ್ತೇಜನ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಪ್ರವಾಸಿಗರ ಅನುಕೂಲಕ್ಕಾಗಿ ಡಬಲ್-ಡೆಕ್ಕರ್ ಹೆರಿಟೇಜ್ ಬಸ್ ಸೇವೆಯನ್ನು ಕೂಡ ಆರಂಭಿಸಲಾಗುತ್ತಿದೆ. ಈ ಬಸ್ ಸೇವೆ ಜನವರಿ 6ರಿಂದ ಆರಂಭವಾಗಲಿದ್ದು, ಲಖನೌ ನಗರದ ಪ್ರಮುಖ ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಸಂಪರ್ಕಿಸಲಿದೆ. ಇದರಿಂದ ಪ್ರವಾಸಿಗರು ಕಡಿಮೆ ವೆಚ್ಚದಲ್ಲಿ ನಗರ ಪರ್ಯಟನೆ ಮಾಡಲು ಸಾಧ್ಯವಾಗಲಿದೆ.

ಲಖನೌ ನಗರವನ್ನು ಆಗ್ರಾ ಮತ್ತು ವಾರಣಾಸಿಯಂತಹ ಪ್ರಮುಖ ಪ್ರವಾಸೋದ್ಯಮ ನಗರಗಳ ಸಾಲಿಗೆ ತರುವ ಉದ್ದೇಶ ಸರ್ಕಾರದ್ದಾಗಿದ್ದು, ಈ ಎಲ್ಲಾ ಯೋಜನೆಗಳನ್ನು ಸಮಯಬದ್ಧವಾಗಿ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಸರಕಾರ ಸ್ಪಷ್ಟಪಡಿಸಿದೆ.

Soumya

Soumya

I am Soumya Shindhe, an engineering graduate with a strong passion for literature and journalism. I have contributed interview articles to Chittara cine magazine and possess keen interest in writing, communication, and creative expression, aspiring to grow professionally.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!