ವಂತಾರಾ ಸಫಾರಿಗೆ ಮೆಸ್ಸಿ ಫುಲ್ ಫಿದಾ
ಸಫಾರಿ ವೀಕ್ಷಣೆಯ ವೇಳೆ ಮೆಸ್ಸಿ, ಪ್ರಾಣಿಗಳಿಗೆ ದೊರೆಯುತ್ತಿರುವ ಆರೋಗ್ಯ ಸೇವೆ, ವಿಶಾಲ ನೈಸರ್ಗಿಕ ವಾತಾವರಣ ಹಾಗೂ ಆಧುನಿಕ ಸೌಲಭ್ಯಗಳನ್ನು ಕುತೂಹಲದಿಂದ ವೀಕ್ಷಿಸಿದರು. ಮೆಸ್ಸಿಯ ವಂತಾರಾ ಸಫಾರಿ ಭೇಟಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವದ ಕುರಿತು ಜನರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದೆ.
ಅರ್ಜೆಂಟಿನಾ ಫುಟ್‌ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಗುಜರಾತ್‌ನ ಜಾಮ್‌ನಗರದಲ್ಲಿ ಸ್ಥಾಪಿತವಾಗಿರುವ ವಿಶ್ವದ ಅತಿದೊಡ್ಡ ವನ್ಯಜೀವಿ ಸಂರಕ್ಷಣಾ ಕೇಂದ್ರಗಳಲ್ಲೊಂದಾದ ʼವಂತಾರಾʼ ಗೆ ಭೇಟಿ ನೀಡಿ ಅದರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಂತಾರಾ, ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್‌ನ ನಿರ್ದೇಶಕರಾದ ಅನಂತ್ ಅಂಬಾನಿ ಅವರ ಮಾಲೀಕತ್ವದಲ್ಲಿದ್ದು, ವನ್ಯಜೀವಿ ಸಂರಕ್ಷಣೆ ಮತ್ತು ಪುನರ್ವಸತಿಗೆ ತನ್ನನ್ನು ತಾನು ತೊಡಗಿಸಿಕೊಂಡಿದೆ. ಈ ಕೇಂದ್ರದಲ್ಲಿ ವಿವಿಧ ದೇಶಗಳಿಂದ ರಕ್ಷಿಸಲಾದ ಅಪರೂಪದ ಮತ್ತು ಅಪಾಯದಲ್ಲಿರುವ ಪ್ರಾಣಿಗಳಿಗೆ ವೈಜ್ಞಾನಿಕವಾಗಿ ಆರೈಕೆ ಒದಗಿಸಲಾಗುತ್ತಿದೆ.

ಸಫಾರಿ ವೀಕ್ಷಣೆಯ ವೇಳೆ ಮೆಸ್ಸಿ, ಪ್ರಾಣಿಗಳಿಗೆ ದೊರೆಯುತ್ತಿರುವ ಆರೋಗ್ಯ ಸೇವೆ, ವಿಶಾಲ ನೈಸರ್ಗಿಕ ವಾತಾವರಣ ಹಾಗೂ ಆಧುನಿಕ ಸೌಲಭ್ಯಗಳನ್ನು ಕುತೂಹಲದಿಂದ ವೀಕ್ಷಿಸಿದರು.
ಮೆಸ್ಸಿಯ ವಂತಾರಾ ಸಫಾರಿ ಭೇಟಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವದ ಕುರಿತು ಜನರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದೆ.