Saturday, March 14, 2026
Saturday, March 14, 2026

ಭೋಪಾಲ್‌ನಲ್ಲಿ ಅಡ್ವೆಂಚರ್ ಪ್ರವಾಸೋದ್ಯಮ ಸುರಕ್ಷತೆಗೆ ತರಬೇತಿ

ಭೋಪಾಲ್‌ನಲ್ಲಿ ಭಾರತದ ಸಾಹಸ ಪ್ರವಾಸೋದ್ಯಮ ಕ್ಷೇತ್ರದ ಸುರಕ್ಷತೆ ಮತ್ತು ಸುಸ್ಥಿರತೆಗಾಗಿ ಪ್ರವಾಸೋದ್ಯಮ ಸಚಿವಾಲಯ ಮತ್ತು ATOAI ಒಕ್ಕೂಟ ಕಾರ್ಯತಂತ್ರ ರೂಪಿಸಿದೆ.

ಭಾರತ ಸರಕಾರದ ಪ್ರವಾಸೋದ್ಯಮ ಸಚಿವಾಲಯ ಭಾರತೀಯ ಸಾಹಸ ಪ್ರವಾಸ ನಿರ್ವಾಹಕರ ಸಂಘದ (ATOAI) ಸಹಯೋಗದೊಂದಿಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಾಲ್ಕು ದಿನಗಳ ಕಾಲ “ಸಾಹಸ ಮಾರ್ಗದರ್ಶಿ ತರಬೇತಿ ಕಾರ್ಯಕ್ರಮ” ಮತ್ತು “ರಾಷ್ಟ್ರೀಯ ವಿಚಾರ ಸಂಕಿರಣ”ವನ್ನು ಆಯೋಜಿಸಿದೆ. ಮಾರ್ಚ್ 17 ರಿಂದ 20 ರವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾರತದ ಸಾಹಸ ಪ್ರವಾಸೋದ್ಯಮದಲ್ಲಿ ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸುವ ಮತ್ತು ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ.

ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಮಾಹಿತಿ ತಿಳಿಸಿದ್ದಾರೆ.

ಚಾಲಕರಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ನೀಡಲು ಕರ್ನಾಟಕ ಸರಕಾರ ನಿರ್ಧಾರ

ಏನಿರಲಿದೆ ಕಾರ್ಯಕ್ರಮದಲ್ಲಿ?

  • ಕಾಡು ಅಥವಾ ದುರ್ಗಮ ಪ್ರದೇಶಗಳಲ್ಲಿ ಅಪಘಾತ ಸಂಭವಿಸಿದಾಗ ನೀಡಬೇಕಾದ ಪ್ರಥಮ ಚಿಕಿತ್ಸೆ ಮತ್ತು ವೈದ್ಯಕೀಯ ನೆರವು.
  • ಅನಿರೀಕ್ಷಿತ ಅಪಾಯಗಳನ್ನು ಎದುರಿಸುವ ವಿಧಾನಗಳು ಮತ್ತು ಸುರಕ್ಷಿತವಾಗಿ ಜನರನ್ನು ಸ್ಥಳಾಂತರಿಸುವ ಯೋಜನೆ.
  • ಹೆಚ್ಚಿನ ಅಪಾಯವಿರುವ ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು.
  • ʼಹೊಸ ಯುಗದ ಸಾಹಸ ಕಾರ್ಯತಂತ್ರʼʼ (Adventure Strategy for a New Era) ಎಂಬ ವಿಷಯದ ಅಡಿಯಲ್ಲಿ ಒಂದು ದಿನದ ವಿಚಾರ ಸಂಕಿರಣ ನಡೆಯಲಿದೆ. ಇದರಲ್ಲಿ ಪ್ರವಾಸ ನಿರ್ವಾಹಕರು, ಸಾಹಸ ಕ್ಲಬ್‌ಗಳು, ಉದ್ಯಮದ ತಜ್ಞರು ಭಾಗವಹಿಸಿ ಭಾರತವನ್ನು ಜಾಗತಿಕ ಸಾಹಸ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ಬಗ್ಗೆ ಚರ್ಚಿಸಲಿದ್ದಾರೆ.

ವಿಶೇಷ ಎಂದರೆ ಪ್ರವಾಸೋದ್ಯಮವನ್ನು ಸುಧಾರಿಸಲು ಮತ್ತು ಪ್ರವಾಸಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಆಧುನಿಕ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆಯನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ವಿಚಾರ ಸಂಕಿರಣದಲ್ಲಿ ಚರ್ಚೆ ನಡೆಯಲಿದೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!