Monday, December 15, 2025
Monday, December 15, 2025

ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಜೋಡಿಸಿದ ಮಿಜೋರಾಂ ಮತ್ತು ಅಸ್ಸಾಂ

ಮಿಜೋರಾಂ ಪ್ರವಾಸೋದ್ಯಮದ ಪ್ರಚಾರಕ್ಕಾಗಿ ಪ್ರಮುಖ ಪ್ರವಾಸೋದ್ಯಮ ಕಾರ್ಯಕ್ರಮಗಳಲ್ಲಿ ಚಿತ್ರಗಳು ಹಾಗೂ ವೀಡಿಯೊ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಹ್ಮಾರ್ ಮನವಿ ಮಾಡಿದರು. ಇದಕ್ಕೆ ದಾಸ್ ಸಹಕಾರ ನೀಡುವ ಭರವಸೆ ನೀಡಿದರು. ಜತೆಗೆ, ಮಿಜೋರಾಂ ಆಧಾರಿತ ಪ್ರವಾಸ ಏಜೆಂಟರಿಗೆ ಗುಹಾವಟಿಯಲ್ಲಿ ಕಾರ್ಯಾಗಾರಗಳನ್ನು ಆಯೋಜಿಸುವ ಸಾಧ್ಯತೆಯನ್ನೂ ಅಸ್ಸಾಂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಪರಿಶೀಲಿಸಲಿದೆ.

ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮಿಜೋರಾಂ ಮತ್ತು ಅಸ್ಸಾಂ ರಾಜ್ಯಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಲು ಒಪ್ಪಂದ ಮಾಡಿಕೊಂಡಿವೆ. ಈ ಕುರಿತು ಮಿಜೋರಾಂ ಪ್ರವಾಸೋದ್ಯಮ ಸಚಿವ ಲಾಲ್‌ಘಿಂಗ್‌ಲೋವಾ ಹ್ಮಾರ್ ಹಾಗೂ ಅಸ್ಸಾಂ ಪ್ರವಾಸೋದ್ಯಮ ಸಚಿವ ರಂಜೀತ್ ಕುಮಾರ್ ದಾಸ್ ಅವರು ಗುಹಾವಟಿಯಲ್ಲಿ ಮಹತ್ವದ ಚರ್ಚೆ ನಡೆಸಿದರು.

ಸಭೆಯಲ್ಲಿ ಎರಡೂ ರಾಜ್ಯಗಳ ನಡುವೆ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಅಧಿಕೃತ ಸಹಕಾರ ಒಪ್ಪಂದಕ್ಕೆ ಮುಂದಾಗುವ ಬಗ್ಗೆ ಸಹಮತ ವ್ಯಕ್ತವಾಯಿತು. ಮಿಜೋರಾಂನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಇತ್ತೀಚೆಗೆ ಹೆಚ್ಚಳವಾಗುತ್ತಿರುವುದನ್ನು ಉಲ್ಲೇಖಿಸಿದ ಹ್ಮಾರ್, ಅಸ್ಸಾಂ ಜತೆಗಿನ ಸಮನ್ವಯದಿಂದ ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಬಹುದು ಎಂದು ಹೇಳಿದರು.

ಅಸ್ಸಾಂ ಪ್ರವಾಸೋದ್ಯಮ ಸಚಿವ ರಂಜೀತ್ ಕುಮಾರ್ ದಾಸ್ ಅವರು ಈ ಅಭಿಪ್ರಾಯಕ್ಕೆ ಒಪ್ಪಿಗೆ ಸೂಚಿಸಿ, ಉತ್ತಮ ರೈಲು ಸಂಪರ್ಕ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಯಿಂದ ಅಸ್ಸಾಂನಿಂದ ಮಿಜೋರಾಂಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

North east tourism


ಮಿಜೋರಾಂ ಪ್ರವಾಸೋದ್ಯಮದ ಪ್ರಚಾರಕ್ಕಾಗಿ ಪ್ರಮುಖ ಪ್ರವಾಸೋದ್ಯಮ ಕಾರ್ಯಕ್ರಮಗಳಲ್ಲಿ ಚಿತ್ರಗಳು ಹಾಗೂ ವಿಡಿಯೋ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಹ್ಮಾರ್ ಮನವಿ ಮಾಡಿದರು. ಇದಕ್ಕೆ ದಾಸ್ ಸಹಕಾರ ನೀಡುವ ಭರವಸೆ ನೀಡಿದರು. ಜತೆಗೆ, ಮಿಜೋರಾಂ ಆಧಾರಿತ ಪ್ರವಾಸ ಏಜೆಂಟರಿಗೆ ಗುಹಾವಟಿಯಲ್ಲಿ ಕಾರ್ಯಾಗಾರಗಳನ್ನು ಆಯೋಜಿಸುವ ಸಾಧ್ಯತೆಯನ್ನೂ ಅಸ್ಸಾಂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಪರಿಶೀಲಿಸಲಿದೆ.

ಈ ಒಪ್ಪಂದದ ಮೂಲಕ ಉತ್ತರಪೂರ್ವ ಭಾರತದ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

Soumya

Soumya

I am Soumya Shindhe, an engineering graduate with a strong passion for literature and journalism. I have contributed interview articles to Chittara cine magazine and possess keen interest in writing, communication, and creative expression, aspiring to grow professionally.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!