ಜಪಾನ್ ಪ್ರವಾಸದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ
ಸಹಜ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ಬಹುಭಾಷಾ ನಟಿ ಸಾಯಿ ಪಲ್ಲವಿ ಜಪಾನ್ ಪ್ರವಾಸವನ್ನು ಕೈಗೊಂಡಿದ್ದಾರೆ. ಜಪಾನ್ನಲ್ಲಿ ಹಿಮ ಬೀಳುವ ಕ್ಷಣವನ್ನು ಆನಂದಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಹುಭಾಷಾ ನಟಿ, ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಜಪಾನ್ ಪ್ರವಾಸದಲ್ಲಿದ್ದಾರೆ. ಪ್ರೇಮಂ, ಅಮರನ್, ಫಿದಾ, ಗಾರ್ಗಿ ಮುಂತಾದ ಸೂಪರ್ ಹಿಟ್ ಚಿತ್ರಗಳ ಮೂಲಕ ಹೆಸರು ಮಾಡಿರುವ ಸಾಯಿ ಪಲ್ಲವಿ ಈಗ ಅಮೀರ್ ಖಾನ್ ನಿರ್ಮಾಣದ ’ಏಕ್ ದಿನ್’ ಚಿತ್ರೀಕರಣದಲ್ಲಿ ಬಿಜಿಯಾಗಿದ್ದಾರೆ. ಶೂಟಿಂಗ್ ನಡುವೆ ಬಿಡುವಿನಲ್ಲಿ ಜಪಾನ್ ಗೆ ತೆರಳಿರುವ ನಟಿ, ಹಿಮದ ನಡುವೆ ಕುಣಿದು ಕುಪ್ಪಳಿಸಿದ್ದಾರೆ.
ಜಪಾನ್ ದೇಶದ ಸೊಬಗಿನಲ್ಲಿ ಕಳೆದು ಹೋಗಿರುವ ಸಾಯಿಪಲ್ಲವಿ, ಅಲ್ಲಿ ಕಳೆದ ಕ್ಷಣಗಳ ಬಗ್ಗೆ ವಿಡಿಯೋವೊಂದನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿಗಳು ʻದಿ ಡೆಫಿನೇಶನ್ ಫಾರ್ ಟ್ರೂ ಬ್ಯೂಟಿʼ ಎಂದು ಕಾಮೆಂಟ್‌ಗಳ ಸುರಿಮಳೆಗೈದಿದ್ದಾರೆ.