Wednesday, February 4, 2026
Wednesday, February 4, 2026

ಉಡುಪಿ ಶ್ರೀಕೃಷ್ಣ ಮಠದಲ್ಲಿ ಹೊಸ ವಸ್ತ್ರ ಸಂಹಿತೆ ಜಾರಿ

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ದೇಶವನ್ನೇ ಆಕರ್ಷಿಸುತ್ತಿರುವ ಉಡುಪಿ ಶ್ರೀಕೃಷ್ಣ ಮಠವು ವರ್ಷಾರಂಭದಲ್ಲೇ ಭಕ್ತರಿಗಾಗಿ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಮಠದ ಪಾವಿತ್ರ್ಯತೆ ಮತ್ತು ಸಾಂಪ್ರದಾಯಿಕ ಮೌಲ್ಯಗಳನ್ನು ಕಾಪಾಡುವ ಉದ್ದೇಶದಿಂದ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ಇದನ್ನು ಪಾಲಿಸಿದವರಿಗಷ್ಟೇ ಮಠ, ದೇವಾಲಯಗಳಿಗೆ ಪ್ರವೇಶ ಎಂಬ ಮಾಹಿತಿ ನೀಡಿದೆ.

ವಿಶ್ವಪ್ರಸಿದ್ಧ ವೈಷ್ಣವ ಧಾರ್ಮಿಕ ಕೇಂದ್ರವಾಗಿರುವ ಉಡುಪಿ ಶ್ರೀಕೃಷ್ಣ ಮಠವು ಇಲ್ಲಿಗೆ ಭೇಟಿ ನೀಡುವ ಭಕ್ತರಿಗಾಗಿ ವಿಶೇಷ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಇದರ ಪ್ರಕಾರ, ದೇವಸ್ಥಾನದ ಒಳಗೆ ಪ್ರವೇಶ ಮಾಡಲು ಭಕ್ತರು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಲೇಬೇಕಾಗಿದೆ. ಪುರುಷರು ತಮ್ಮ ಶರ್ಟ್‌ಗಳನ್ನು ದರ್ಶನದ ಸಮಯದಲ್ಲಿ ತೆಗೆದುಹಾಕಲೇಬೇಕು. ಇನ್ನು, ಮಹಿಳಾ ಭಕ್ತರು ಪಾಶ್ಚಿಮಾತ್ಯ ಉಡುಗೆಗಳಾದ ಶರ್ಟ್‌, ಜೀನ್ಸ್‌, ತೋಳಿಲ್ಲದ ಬಟ್ಟೆ, ಶಾರ್ಟ್ಸ್‌ಗಳನ್ನು ಧರಿಸುವಂತಿಲ್ಲ. ಬದಲಾಗಿ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದರೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶ ನೀಡಲಾಗುತ್ತದೆ. ಈ ಹೊಸ ವಸ್ತ್ರ ಸಂಹಿತೆಯು ಶ್ರೀಕೃಷ್ಣ ಮಠದ ಪಾವಿತ್ರ್ಯತೆ ಕಾಪಾಡುವ ಹಾಗೂ ಸಾಂಪ್ರದಾಯಿಕ ಪದ್ಧತಿ, ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ ಎಂದು ಶಿರೂರು ಮಠವು ತಿಳಿಸಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ