ಮುಂಬೈನ ಎರಡನೆಯ ವಿಮಾನ ನಿಲ್ದಾಣವಾಗಿ ಹೊರಹೊಮ್ಮುತ್ತಿರುವ ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇಶೀಯ ವಿಮಾನಯಾನ ಕ್ಷೇತ್ರದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪ್ರಕಟಿತ ಹೊಸ ಬೇಸಿಗೆ ವೇಳಾಪಟ್ಟಿಯ ಪ್ರಕಾರ, ಈ ನಿಲ್ದಾಣವು ಭಾರತದಾದ್ಯಂತ 46 ಪ್ರಮುಖ ನಗರಗಳಿಗೆ ನೇರ ವಿಮಾನ ಸಂಪರ್ಕವನ್ನು ಕಲ್ಪಿಸಲಿದೆ.

ಬೆಂಗಳೂರು, ದೆಹಲಿ, ಹೈದರಾಬಾದ್, ಚೆನ್ನೈ, ಕೋಲ್ಕತ್ತಾ ಮತ್ತು ಅಹಮದಾಬಾದ್‌ನಂತಹ ಪ್ರಮುಖ ನಗರಗಳಿಗೆ ಹೆಚ್ಚಿನ ಸಂಖ್ಯೆಯ ವಿಮಾನಗಳು ಸಂಚರಿಸಲಿವೆ. ಇದರ ಜತೆಗೆ ಬೇಸಿಗೆಯ ರಜಾದಿನಗಳನ್ನು ಗಮನದಲ್ಲಿಟ್ಟುಕೊಂಡು ಗೋವಾ, ಕೊಚ್ಚಿ, ಜೈಪುರ ಮತ್ತು ಶ್ರೀನಗರದಂಥ ಜನಪ್ರಿಯ ಪ್ರವಾಸಿ ತಾಣಗಳಿಗೆ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಾಗಿದೆ. ಇಂಡಿಗೋ, ಏರ್ ಇಂಡಿಯಾ ಮತ್ತು ಅಕಾಸಾ ಏರ್‌ನಂಥ ಪ್ರಮುಖ ಸಂಸ್ಥೆಗಳು ಇಲ್ಲಿಂದ ಹೆಚ್ಚಿನ ಕಾರ್ಯಾಚರಣೆ ನಡೆಸಲಿದ್ದು ಒಟ್ಟು 46 ಪ್ರಮುಖ ನಗರಗಳಿಗೆ ಹಾರಲಿವೆ.