ರಾಜ್ಯದಲ್ಲಿ ಚಾರಣಕ್ಕೆ ಹೊಸ ರೂಲ್ಸ್
ಶಬ್ದಕಾರಿ ಸಾಧನಗಳು, ಆಯುಧಗಳು, ಕ್ಯಾಂಪ್ ಫೈರ್ ಹಾಗೂ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಚಾರಣದ ಅವಧಿಯಲ್ಲಿ ಗೈಡ್‌ಗಳು ಚಾರಣಿಗರ ಸಂಪೂರ್ಣ ಜವಾಬ್ದಾರಿ ಹೊತ್ತುಕೊಳ್ಳಬೇಕು. ಪ್ರತಿ ಅರ್ಧ ಗಂಟೆಗೆ ಬೇಸ್ ಕ್ಯಾಂಪ್ ಜತೆ ಸಂಪರ್ಕದಲ್ಲಿರಬೇಕು ಮತ್ತು ಚಾರಣಿಗರ ಸಂಖ್ಯೆಯನ್ನು ಪರಿಶೀಲಿಸಬೇಕು. ಅಪ್ರಾಪ್ತ ವಯಸ್ಕರಿಗೆ ಪೋಷಕರ ಅನುಮತಿ ಪತ್ರ ಹಾಗೂ ಹಿರಿಯ ನಾಗರಿಕರಿಗೆ ದೈಹಿಕ ಸಾಮರ್ಥ್ಯ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಚಾರಣ ಪಥಗಳಲ್ಲಿ ಚಾರಣಿಗರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ಬಿಡುಗಡೆ ಮಾಡಲಾಗಿದೆ ಎಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇತ್ತೀಚಿನ ಕೆಲವು ದುರ್ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಚಾರಣಿಗರು ಪ್ರಕೃತಿ ಮಾರ್ಗದರ್ಶಕನಿಲ್ಲದೆ ಚಾರಣಕ್ಕೆ ತೆರಳದಂತೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ.
ಇನ್ನು ಮುಂದೆ ಪ್ರತಿ 10 ಚಾರಣಿಗರಿಗೆ ಒಬ್ಬ ಮಾರ್ಗದರ್ಶಕ ಕಡ್ಡಾಯವಾಗಿದ್ದು, ಒಂದು ಬ್ಯಾಚ್‌ನಲ್ಲಿ ಗರಿಷ್ಠ 150 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಚಾರಣಕ್ಕೆ ಬರುವವರು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಪ್ರತಿಯೊಬ್ಬ ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆಪ್ ಅಳವಡಿಸಲಾಗುತ್ತದೆ. ನೇಚರ್ ಗೈಡ್‌ಗಳಿಗೆ ಜಿಪಿಎಸ್ ಹೊಂದಿದ ವಾಕಿ-ಟಾಕಿ ನೀಡಲಾಗುವುದು. ದಾರಿ ತಪ್ಪಿದರೆ ತಕ್ಷಣ ಪತ್ತೆಹಚ್ಚಲು ಈ ವ್ಯವಸ್ಥೆ ಸಹಕಾರಿಯಾಗಲಿದೆ. ಬೇಸ್ ಕ್ಯಾಂಪ್‌ನಲ್ಲಿ ಚಾರಣದ ಪೂರ್ವಭಾವಿ ಮಾಹಿತಿ, ಸುರಕ್ಷತಾ ಮಾರ್ಗಸೂಚಿಗಳು ನೀಡಲಾಗುತ್ತದೆ.
ಇದನ್ನೂ ಓದಿ: ಅಂಜನಾದ್ರಿ ಬೆಟ್ಟದ ದರ್ಶನ ಸಮಯದಲ್ಲಿ ಬದಲಾವಣೆ
ಶಬ್ದಕಾರಿ ಸಾಧನಗಳು, ಆಯುಧಗಳು, ಕ್ಯಾಂಪ್ ಫೈರ್ ಹಾಗೂ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಚಾರಣದ ಅವಧಿಯಲ್ಲಿ ಗೈಡ್‌ಗಳು ಚಾರಣಿಗರ ಸಂಪೂರ್ಣ ಜವಾಬ್ದಾರಿ ಹೊತ್ತುಕೊಳ್ಳಬೇಕು. ಪ್ರತಿ ಅರ್ಧ ಗಂಟೆಗೆ ಬೇಸ್ ಕ್ಯಾಂಪ್ ಜತೆ ಸಂಪರ್ಕದಲ್ಲಿರಬೇಕು ಮತ್ತು ಚಾರಣಿಗರ ಸಂಖ್ಯೆಯನ್ನು ಪರಿಶೀಲಿಸಬೇಕು. ಅಪ್ರಾಪ್ತ ವಯಸ್ಕರಿಗೆ ಪೋಷಕರ ಅನುಮತಿ ಪತ್ರ ಹಾಗೂ ಹಿರಿಯ ನಾಗರಿಕರಿಗೆ ದೈಹಿಕ ಸಾಮರ್ಥ್ಯ ಪ್ರಮಾಣಪತ್ರ ಕಡ್ಡಾಯವಾಗಿದ್ದು, ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಅರಣ್ಯ ವಿಹಾರ ತಾಣಗಳ ಎಲ್ಲಾ ಚಾರಣ ಪಥಗಳನ್ನು ಶೀಘ್ರದಲ್ಲೇ https://aranyavihaara.karnataka.gov.in ಪೋರ್ಟಲ್‌ನಲ್ಲಿ ಸೇರಿಸಿ ಮುಂಗಡ ಬುಕಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಚಾರಣಿಗರ ಸುರಕ್ಷತೆ, ಪ್ರಕೃತಿ ಸಂರಕ್ಷಣೆ ಮತ್ತು ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ನಮ್ಮ ಸರಕಾರದ ಆದ್ಯತೆ ಎಂದು ಅವರು ತಿಳಿಸಿದ್ದಾರೆ.