Tuesday, March 31, 2026
Tuesday, March 31, 2026

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಯುವ ಜನತೆಗೆ ಅವಕಾಶ!

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಯುವ ಪ್ರತಿಭೆಗಳಿಗೆ ಅಡಿಗಾಸ್ ಯಾತ್ರಾ ಸಂಸ್ಥೆ "Destination Management Expert" ಹೆಸರಿನಡಿ ಭಾರತದಾದ್ಯಂತ ಹಾಗೂ ಪ್ರಪಂಚದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ 3 ತಿಂಗಳ ಅವಧಿಯಲ್ಲಿ ವಿಶೇಷ ತರಬೇತಿ ಅವಕಾಶ ರೂಪಿಸಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಡಿಗಾಸ್ ಯಾತ್ರಾ ಸಂಸ್ಥೆ ಇದೀಗ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಯುವ ಪ್ರತಿಭೆಗಳಿಗೆ ಸುವರ್ಣಾವಕಾಶ ಕಲ್ಪಿಸಿದೆ. ಸಂಸ್ಥೆಯು ಅರ್ಹ ಅಭ್ಯರ್ಥಿಗಳಿಗೆ "Destination Management Expert" ಹೆಸರಿನಡಿ ಭಾರತದಾದ್ಯಂತ ಹಾಗೂ ಪ್ರಪಂಚದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ 3 ತಿಂಗಳ ಅವಧಿಯಲ್ಲಿ ವಿಶೇಷ ತರಬೇತಿ ಅವಕಾಶ ರೂಪಿಸಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಸ್ಟೈಪೆಂಡ್ ಹಾಗೂ ಇನ್ಸೆಂಟಿವ್‌ (incentive) ಕೊಡಲಾಗುತ್ತದೆ.

ಭೂತಾನ್, ನೇಪಾಳ, ಸಿಂಗಾಪುರ, ಮಲೇಷಿಯಾ, ಥೈಲ್ಯಾಂಡ್, ಜಪಾನ್, ದಕ್ಷಿಣ ಆಫ್ರಿಕಾ, ಅಮೇರಿಕಾ, ಯುರೋಪ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಡೋನೇಶಿಯ, ವಿಯೆಟ್ನಾಂ ಇತ್ಯಾದಿ ದೇಶಗಳ ಸಂಪೂರ್ಣ ತರಬೇತಿ ಕೊಡಲಾಗುತ್ತದೆ. ಯಾವುದೇ ಪದವಿ ಹೊಂದಿದವರು, ಪ್ರವಾಸೋದ್ಯಮದಲ್ಲಿ ಆಸಕ್ತಿಯುಳ್ಳವರು ಹಾಗೂ freshers ತಮ್ಮ ವೈಯಕ್ತಿಕ ವಿವರ ಒಳಗೊಂಡ ಅರ್ಜಿಗಳನ್ನು adigasyatra@gmail.com ಈ ವಿಳಾಸಕ್ಕೆ ಕಳುಹಿಸಲು ಸಂಸ್ಥೆಯ H.R ಶ್ರೀ ನವೀನ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9611600810 ಈ ನಂಬರ್‌ಗೆ ಕರೆ ಮಾಡಬಹುದು.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ