Saturday, November 22, 2025
Saturday, November 22, 2025

ಲಾಲ್‌ ಬಾಗ್‌ನಲ್ಲಿ ಫೊಟೋ, ವಿಡಿಯೋ ಶೂಟ್ ಬ್ಯಾನ್‌!

ಬೆಂಗಳೂರಿನ 2 ಪ್ರಮುಖ ಪಾರ್ಕ್‌ಗಳಾದ ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ಕ್ಯಾಮೆರಾ ಬಳಕೆಯ ಮೇಲೆಯೇ ನಿರ್ಬಂಧ ಹೇರಿದಂತಾಗಿದೆ. ಅಲ್ಲದೇ ಈ ನಿಯಮವನ್ನು ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

ಲಾಲ್‌ ಬಾಗ್‌ನಲ್ಲಿ ಫೊಟೋ, ವಿಡಿಯೋ ಶೂಟ್‌ ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ನಿಷೇಧ ಹೇರಿ ಆದೇಶ ಹೊರಡಿಸಿದೆ. ಇದರಿಂದಾಗಿ ಬೆಂಗಳೂರಿನ 2 ಪ್ರಮುಖ ಪಾರ್ಕ್‌ಗಳಾದ ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ಕ್ಯಾಮೆರಾ ಬಳಕೆಯ ಮೇಲೆಯೇ ನಿರ್ಬಂಧ ಹೇರಿದಂತಾಗಿದೆ. ಅಲ್ಲದೇ ಈ ನಿಯಮವನ್ನು ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ.

ಹೊಸ ನಿಯಮದ ಪ್ರಕಾರ, ಲಾಲ್‌ ಬಾಗ್‌ನಲ್ಲಿ ಬೆಳಗ್ಗೆ 5.30ರಿಂದ 9ರ ವರೆಗೆ ಹಾಗೂ ಸಂಜೆ 4.30 ರಿಂದ 7 ರವರೆಗೆ ಮಾತ್ರ ವಾಕಿಂಗ್ ಮತ್ತು ಜಾಗಿಂಗ್‌ಗೆ ಅವಕಾಶವಿದೆ. ಅಲ್ಲದೇ ಕಬ್ಬನ್‌ ಪಾರ್ಕ್‌ನಲ್ಲಿ ಮಾಡಬಹುದಾದ ಸೈಕ್ಲಿಂಗ್ ಮತ್ತು ಸ್ಕೇಟಿಂಗ್‌ಗಳಂಥ ಚಟುವಟಿಕೆಗಳಿಗೆ ಲಾಲ್‌ ಬಾಗ್‌ನಲ್ಲಿ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಜತೆಗೆ ಹೊರಗಿನವರು ನೇರವಾಗಿ ಇಲ್ಲಿಗೆ ಬಂದು ಗಿಡಗಳನ್ನು ನೆಡುವುದಕ್ಕೆ ಅವಕಾಶವಿಲ್ಲ. ಆದರೆ ಪರಿಸರ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಗಿಡ ನೆಡುವ ಕಾರ್ಯಕ್ರಮಗಳಿದ್ದರೆ ತೋಟಗಾರಿಕೆ ಇಲಾಖೆಯಿಂದ ಮುಂಚಿತವಾಗಿ ಅನುಮತಿ ಪಡೆದರೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಹೊಸ ನಿಯಮವನ್ನು ಸಸ್ಯ ಸಂಪತ್ತು ಮತ್ತು ಜೀನ್ ಬ್ಯಾಂಕ್‌ಗಳನ್ನು ಸಂರಕ್ಷಿಸುವ ಕಾರಣ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ಕಲ್ಲಿನಲ್ಲಿ ಅರಳಿದ ಕಲಾಕುಸುಮ - ಪುಷ್ಕರಣಿ

Read Previous

ಕಲ್ಲಿನಲ್ಲಿ ಅರಳಿದ ಕಲಾಕುಸುಮ - ಪುಷ್ಕರಣಿ

ಮಕ್ಕಳ ಜೊತೆ ಬೆಂಗಳೂರಿನ ಈ ಸ್ಥಳಗಳಿಗೊಮ್ಮೆ ಭೇಟಿ ಕೊಟ್ಟು ನೋಡಿ, ನೀವೂ ಮಕ್ಕಳೇ ಆಗಿಬಿಡುತ್ತೀರಿ..

Read Next

ಮಕ್ಕಳ ಜೊತೆ ಬೆಂಗಳೂರಿನ ಈ ಸ್ಥಳಗಳಿಗೊಮ್ಮೆ ಭೇಟಿ ಕೊಟ್ಟು ನೋಡಿ, ನೀವೂ ಮಕ್ಕಳೇ ಆಗಿಬಿಡುತ್ತೀರಿ..