Friday, January 2, 2026
Friday, January 2, 2026

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧ

ಕೊಲ್ಕತ್ತಾದಿಂದ ಗುವಾಹಟಿಗೆ ಸಂಚರಿಸುವ ಈ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಜನವರಿ 18 ಅಥವಾ 19ರಂದು ಉದ್ಘಾಟಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಗೌಹಾಟಿ-ಕೊಲ್ಕತ್ತಾ ಮಾರ್ಗದಲ್ಲಿ ತನ್ನ ಸಂಚಾರ ನಡೆಸಲು ಸಿದ್ಧವಾಗಿದೆ. ಕೊಲ್ಕತ್ತಾದಿಂದ ಗುವಾಹಟಿಗೆ ಸಂಚರಿಸುವ ಈ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಜನವರಿ 18 ಅಥವಾ 19ರಂದು ಉದ್ಘಾಟಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ವಂದೇ ಭಾರತ್ ಚೇರ್ ಕಾರ್ ಭಾರತೀಯ ರೈಲ್ವೆಯಲ್ಲಿ ಹೊಸ ಯುಗವನ್ನು ಪ್ರಾರಂಭಿಸಿದೆ. ಜನರು ಇದನ್ನು ತುಂಬಾ ಇಷ್ಟಪಡಲು ಪ್ರಾರಂಭಿಸಿದ್ದಾರೆ. ವಂದೇ ಭಾರತ್ ರೈಲುಗಳ ಸಂಚಾರಕ್ಕೆ ದೇಶದ ಮೂಲೆ ಮೂಲೆಗಳಿಂದ ಬೇಡಿಕೆಗಳು ಬರುತ್ತಿವೆ. ವಂದೇ ಭಾರತ್ ಸ್ಲೀಪರ್ ರೈಲನ್ನು ಸಾವಿರ ಕಿಲೋಮೀಟರ್‌ಗಳಿಗೂ ಅಧಿಕ ದೂರದ ಪ್ರಯಾಣವನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಆಧುನಿಕ ಪ್ರಯಾಣದ ಅನುಭವವನ್ನು ವಂದೇ ಭಾರತ್ ನೀಡಲಿದೆ.

ವಂದೇ ಭಾರತ್ ಸ್ಲೀಪರ್ ಆಧುನಿಕ ಟೆಕ್ನಾಲಜಿಯೊಂದಿಗೆ, ಸುಧಾರಿತ ಸಸ್ಪೆನ್ಷನ್ ವ್ಯವಸ್ಥೆ ಮತ್ತು ರಾತ್ರಿ ಪ್ರಯಾಣವನ್ನು ಹೆಚ್ಚು ಅನುಕೂಲಕರವಾಗಿಸಲು ವಿಶ್ವ ದರ್ಜೆಯ ಸ್ಲೀಪರ್ ಕೋಚ್‌ಗಳನ್ನು ಹೊಂದಿದೆ” ಎಂದು ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

Soumya

Soumya

I am Soumya Shindhe, an engineering graduate with a strong passion for literature and journalism. I have contributed interview articles to Chittara cine magazine and possess keen interest in writing, communication, and creative expression, aspiring to grow professionally.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!