Friday, October 3, 2025
Friday, October 3, 2025

ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಕಾಲ್ತುಳಿತಕ್ಕೆ 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಭಕ್ತರನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭುವನೇಶ್ವರ: ಒಡಿಶಾದ ಪುರಿಯಲ್ಲಿಂದು ನಡೆಯುತ್ತಿದ್ದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ (Jagannath Rath Yatra) ವೇಳೆ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಭಕ್ತರನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಅಂಬುಲೆನ್ಸ್‌ಗಳು ರಥಯಾತ್ರೆ ಸ್ಥಳಕ್ಕೆ ತಲುಪಿವೆ. ಸಂತ್ರಸ್ತರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೂ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ.

puri (2)

ಬಲಭದ್ರನ ತಾಳಧ್ವಜ ರಥ ಎಳೆಯುವ ವೇಳೆ ವಿಳಂಭವಾಗಿತ್ತು. ಇದರಿಂದ ರಥಯಾತ್ರೆ ಮಾರ್ಗದ ತಿರುವಿನಲ್ಲಿ ಬಹಳಷ್ಟು ತೊಂದ್ರೆ ಉಂಟಾಗಿತ್ತು. ಈ ವೇಳೆ ರಥ ನಿಂತಿದ್ದರಿಂದ ರಥ ನಿಂತಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂದು ಹೇಳಲಾಗುತ್ತಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಒಡಿಶಾ ಸಚಿವ ಮುಖೇಶ್ ಮಹಾಲಿಂಗ್, ಘಟನೆ ನಿಜಕ್ಕೂ ಆಘಾತಕಾರಿಯಾಗಿದೆ. ರಕ್ಷಣಾ ತಂಡವು ಕೂಡಲೇ ನೆರವಿಗೆ ಧಾವಿಸಿ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಆರೋಗ್ಯ ಕೇಂದ್ರಗಳನ್ನೂ ಸ್ಥಾಪಿಸಲಾಗಿದೆ. ನೀರು ಮತ್ತು ಗ್ಲೂಕೋಸ್‌ಗೆ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿ ಭಕ್ತರ ಆರೋಗ್ಯ ವಿಚಾರಿಸುತ್ತೇನೆ ಎಂದು ತಿಳಿಸಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆಯುವ ರಥಯಾತ್ರೆ ಅದೊಂದು ಐತಿಹಾಸಿಕ ಹಿಂದೂ ಹಬ್ಬ. 1878ರಿಂದಲೂ ಪ್ರತಿವರ್ಷ ರಥೋತ್ಸವ ಜರುಗುತ್ತಿದೆ. ಜಗನ್ನಾಥ ದೇವಸ್ಥಾನವು ಆಷಾಢ ಸುಧ್ ಬಿಜ್‌ನಂದು ರಥಯಾತ್ರೆ ಮೆರವಣಿಗೆಯನ್ನು ಆಯೋಜಿಸುತ್ತದೆ. ಈ ಹಬ್ಬದಂದು ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವತೆಗಳನ್ನು ಪೂಜಿಸಲಾಗುತ್ತದೆ. ಇದು 148ನೇ ಜಗನ್ನಾಥ ರಥಯಾತ್ರೆ ಆಗಿದೆ.

Bhagya Divana

Bhagya Divana

Bhagya Divana is a Professional Journalist. Working in Pravasi Prapancha.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!