ಕರ್ನಾಟಕ ರಾಜ್ಯ ಸರಕಾರವು ಕರಾವಳಿ ಕರ್ನಾಟಕದ ಪ್ರವಾಸೋದ್ಯಮವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಪ್ರಮುಖ ಸ್ಥಾನಕ್ಕೆ ಏರಿಸುವ ಉದ್ದೇಶದಿಂದ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಾಲೋಚನಾ ಸಭೆಯನ್ನು ಆಯೋಜಿಸಿತು.

Untitled design (21)

ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ ಜೆ ಜಾರ್ಜ್, ಶಾಸಕರಾದ ಜಿ ಟಿ ದೇವೇಗೌಡ, ಸತೀಶ್ ಸೈಲ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಮಾತ್ರವಲ್ಲದೆ ಖ್ಯಾತ ನಟ ರಿಷಬ್ ಶೆಟ್ಟಿ ಈ ಸಭೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.