Friday, April 3, 2026
Friday, April 3, 2026

'ಸಹೇಲಿ ಸ್ಮಾರ್ಟ್ ಪಿಂಕ್ ಕಾರ್ಡ್' ಜಾರಿ

ದೆಹಲಿ ಸರಕಾರದ ಈ ನಿರ್ಧಾರವು ದುಡಿಯುವ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ದಿನನಿತ್ಯ ಪ್ರಯಾಣಿಸುವ ಸಾಮಾನ್ಯ ಮಹಿಳೆಯರಿಗೆ ದೊಡ್ಡ ಆಸರೆಯಾಗಲಿದೆ.

ದೆಹಲಿ ಸರಕಾರವು ಮಹಿಳಾ ಸಬಲೀಕರಣ ಮತ್ತು ಸಾರ್ವಜನಿಕ ಸಾರಿಗೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ನಗರದ ಮಹಿಳಾ ಪ್ರಯಾಣಿಕರಿಗಾಗಿ 'ಸಹೇಲಿ ಸ್ಮಾರ್ಟ್ ಪಿಂಕ್ ಕಾರ್ಡ್' ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಇದರಡಿಯಲ್ಲಿ ದೆಹಲಿಯ ಮಹಿಳೆಯರು ನಗರದಾದ್ಯಂತ ಸಾರ್ವಜನಿಕ ಸಾರಿಗೆಯಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ಮಹಿಳೆಯರು ಇನ್ನು ಮುಂದೆ ಟಿಕೆಟ್‌ಗಾಗಿ ಕಾಯುವ ಅಗತ್ಯವಿಲ್ಲದೇ, ಈ ಸ್ಮಾರ್ಟ್ ಕಾರ್ಡ್ ಬಳಸಿ ಸುಲಭವಾಗಿ ಪ್ರಯಾಣಿಸಬಹುದು. ಇದು ಸಾರಿಗೆ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವ ಸರಕಾರದ ಒಂದು ಪ್ರಯತ್ನ ಎನ್ನಲಾಗಿದೆ. ಇದು ಕಾಗದದ ಟಿಕೆಟ್‌ಗಳ ಬಳಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಪ್ರಯಾಣಿಕರ ಡೇಟಾ ನಿರ್ವಹಿಸಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್ ವೇ ಏಪ್ರಿಲ್‌ನಲ್ಲಿ ಪ್ರಾರಂಭ

ವರದಿಗಳ ಪ್ರಕಾರ, ಈ ಕಾರ್ಡ್‌ಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು. ಮಹಿಳೆಯರು ಈ ಕಾರ್ಡ್ ಪಡೆಯಲು ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಕಾರ್ಡ್ ಪಡೆದ ನಂತರ, ದೆಹಲಿ ಸಾರಿಗೆ ಸಂಸ್ಥೆ ಮತ್ತು ಕ್ಲಸ್ಟರ್ ಬಸ್‌ಗಳಲ್ಲಿ ಇದನ್ನು ಬಳಸಬಹುದು. ಮುಂದಿನ ದಿನಗಳಲ್ಲಿ ಇದನ್ನು ಮೆಟ್ರೋ ರೈಲುಗಳಿಗೂ ವಿಸ್ತರಿಸುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!

Read Next

ಗೋವಾ ಹೋದರೆ ಈ ಬೀಚ್‌ಗಳನ್ನು ಮಿಸ್‌ ಮಾಡಿಕೊಳ್ಳಲೇಬೇಡಿ!