ಸ್ಯಾಂಡಲ್ ವುಡ್ ಖ್ಯಾತ ನಟರಾದ ವಿನಯರಾಜಕುಮಾರ್ ಮತ್ತು ಯುವರಾಜಕುಮಾರ್ ತಮ್ಮ ಕುಟುಂಬದೊಂದಿಗೆ ಮಂತ್ರಾಲಯಕ್ಕೆ ತೆರಳಿದ್ದಾರೆ. ವರನಟನ ಸಂಪೂರ್ಣ ಕುಟುಂಬ ರಾಘವೇಂದ್ರ ಸ್ವಾಮಿಗಳ ಪರಮ ಭಕ್ತರಾಗಿದ್ದು, ಆಗಾಗ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ ವಿನಯ್, ಯುವ ಜತೆಗೆ ರಾಘವೇಂದ್ರ ರಾಜಕುಮಾರ್ ಸಹ ರಾಯರ ದರ್ಶನಕ್ಕೆ ಆಗಮಿಸಿ, ಪೂಜೆ ಸಲ್ಲಿಸಿ, ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥರವರ ಆಶೀರ್ವಾದ ಪಡೆದಿರುವುದು ವಿಶೇಷ.

ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದವರಿಂದ ಗೌರವ ಡಾಕ್ಟರೇ ಟ್ ನೀಡಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಯುವರಾಜಕುಮಾರ್, ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರವರಿಗೆ ಹಾಗೂ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.