Thursday, October 9, 2025
Thursday, October 9, 2025

ವನ್ಯಜೀವಿ ಸಂರಕ್ಷಣೆಗೆ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಕಾಡು ಪ್ರಾಣಿಗಳಿಂದ ಜಾನುವಾರುಗಳಿಗೆ ತೊಂದರೆಯಾಗುತ್ತಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕಿದರೆ ಅಥವಾ ಸಾಯಿಸಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಇಂಥ ಕೆಲಸಗಳನ್ನು ಯಾರೇ ಮಾಡಿದರು ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು - ಸಿಎಂ ಸಿದ್ದರಾಮಯ್ಯ.

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

siddharamaiah 1

ಕಾಡು ಪ್ರಾಣಿಗಳಿಂದ ಜಾನುವಾರುಗಳಿಗೆ ತೊಂದರೆಯಾಗುತ್ತಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕಿದರೆ ಅಥವಾ ಸಾಯಿಸಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಇಂಥ ಕೆಲಸಗಳನ್ನು ಯಾರೇ ಮಾಡಿದರು ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಮಾನವ-ವನ್ಯಜೀವಿ ಸಂಘರ್ಷವನ್ನು ತಡೆಯಲು ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯದ ಆರೋಗ್ಯ ವೃದ್ಧಿಯಿಂದ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಅಗ್ರ ಸ್ಥಾನದಲ್ಲಿದೆ. ಅದರ ಜತೆಗೆ ಹುಲಿ, ಆನೆಗಳ ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ವೈಜ್ಞಾನಿಕ ಪರಿಹಾರ ಕ್ರಮಗಳನ್ನು ಅರಣ್ಯಾಧಿಕಾರಿಗಳು ಕಂಡುಕೊಳ್ಳಬೇಕು. ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಅರಣ್ಯ ಸಂಪತ್ತನ್ನು ನಾಶಮಾಡುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

Jadesha Emmiganur

Jadesha Emmiganur

Jadesha Emmiganur Is a Passionate Journalist from Ballari

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..