Saturday, May 9, 2026
Saturday, May 9, 2026

ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಮುಂಬೈ-ಪುಣೆ ರಸ್ತೆ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಈ ತಾಂತ್ರಿಕ ಮೈಲಿಗಲ್ಲಿನ ಮೂಲಕ ಭಾರತದ ರಸ್ತೆ ಮೂಲಸೌಕರ್ಯದ ಶಕ್ತಿಯನ್ನು ಜಗತ್ತಿಗೆ ಪ್ರದರ್ಶಿಸಿದೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಜಾಗತಿಕ ಮಟ್ಟದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಈ ಹೆದ್ದಾರಿಯು ವಿಶ್ವದಲ್ಲೇ ಮೊದಲ ಬಾರಿಗೆ ʼಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ʼ ಅನ್ನು ಸಂಪೂರ್ಣವಾಗಿ ಅಳವಡಿಸಿಕೊಂಡ ಹೆದ್ದಾರಿಯಾಗಿದೆ.

ಇದನ್ನೂ ಓದಿ: ಮುಂಬೈ-ಪುಣೆ ಪ್ರಯಾಣ ಇನ್ನು ಸುಲಭ

ಸುಮಾರು 94 ಕಿಲೋಮೀಟರ್ ಉದ್ದದ ಈ ಹೆದ್ದಾರಿಯು ಈಗ ಕೃತಕ ಬುದ್ಧಿಮತ್ತೆ ಮತ್ತು ಸುಧಾರಿತ ತಂತ್ರಜ್ಞಾನದ ಕಣ್ಗಾವಲಿನಲ್ಲಿ ಇರಲಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸಿದೆ. ಹೆದ್ದಾರಿಯುದ್ದಕ್ಕೂ ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳು ಮತ್ತು ಸೆನ್ಸಾರ್ಸ್‌ ಅಳವಡಿಸಲಾಗಿದೆ. ಇದು ವಾಹನಗಳ ವೇಗ, ಸಂಚಾರ ನಿಯಮಗಳ ಉಲ್ಲಂಘನೆ ಮತ್ತು ಅಪಘಾತಗಳನ್ನು ತಕ್ಷಣವೇ ಪತ್ತೆಹಚ್ಚುತ್ತದೆ.

ವೇಗದ ಮಿತಿ ಮೀರಿದ ಅಥವಾ ಲೇನ್ ಶಿಸ್ತು ಉಲ್ಲಂಘಿಸುವ ವಾಹನಗಳಿಗೆ ಯಾವುದೇ ಮಾನವ ಹಸ್ತಕ್ಷೇಪವಿಲ್ಲದೆ ಸ್ವಯಂಚಾಲಿತವಾಗಿ ಈ-ಚಲನ್ ಜಾರಿಯಾಗಲಿದೆ. ಈ ತಂತ್ರಜ್ಞಾನದ ಬಳಕೆಯಿಂದ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸುವ ಅಪಘಾತಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿಮೆ ಮಾಡುವುದು ಮಹಾರಾಷ್ಟ್ರ ಸರಕಾರದ ಮುಖ್ಯ ಉದ್ದೇಶವಾಗಿದೆ.

ಹೆದ್ದಾರಿಯಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಫಲಕಗಳ ಮೂಲಕ ವಾಹನ ಸವಾರರಿಗೆ ರಸ್ತೆಯ ಸ್ಥಿತಿಗತಿ, ಹವಾಮಾನ ಮುನ್ಸೂಚನೆ ಅಥವಾ ಮುಂದೆ ಇರುವ ಸಂಚಾರ ದಟ್ಟಣೆಯ ಬಗ್ಗೆ ಮುಂಚಿತವಾಗಿ ಮಾಹಿತಿ ದೊರೆಯಲಿದೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ