ಹೊಸ ವರ್ಷಕ್ಕೆ ನಂದಿ ಬೆಟ್ಟಕ್ಕೆ ಹೋಗುವ ಮುನ್ನ ಯೋಚಿಸಿ
ಹೊಸ ವರ್ಷದ ಸಂಭ್ರಮದಿಂದ ಅನಾಹುತ ಆಗುವ ಸಾಧ್ಯತೆ ಹಿನ್ನೆಲೆ ಹೊಸ ವರ್ಷಕ್ಕೆ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಈ ಕುರಿತು ಮಾತನಾಡಿದ್ದು, ಡಿಸೆಂಬರ್ 31-12-25 ಮಧ್ಯಾಹ್ನದಿಂದ 01- 01- 26 ಮಧ್ಯಾಹ್ನದವರೆಗೂ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧೀಸಲಾಗಿದೆ.
- ವಿಶಾಖಾ ಭಟ್ ಹೆಗ್ಗಾರ್
ಚಿಕ್ಕಬಳ್ಳಾಪುರ: ಹೊಸ ವರ್ಷದ ದಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸಂಭ್ರಮಿಸಬೇಕು ಎಂದುಕೊಂಡಿದ್ಬೆಂದೀರಾ? ಬೆಂಗಳೂರಿನ ಸುತ್ತಮುತ್ತಲಿರುವ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲು ಯೋಚಿಸಿದ್ದರೆ ಈಗಲೇ ಪ್ಲಾನ್ ಚೇಂಜ್ ಮಾಡಿ.
ಹೊಸ ವರ್ಷದ ಸಂಭ್ರಮದಿಂದ ಅನಾಹುತ ಆಗುವ ಸಾಧ್ಯತೆ ಹಿನ್ನೆಲೆ ಹೊಸ ವರ್ಷಕ್ಕೆ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಈ ಕುರಿತು ಮಾತನಾಡಿದ್ದು, ಡಿಸೆಂಬರ್ 31-12-25 ಮಧ್ಯಾಹ್ನದಿಂದ 01- 01- 26 ಮಧ್ಯಾಹ್ನದವರೆಗೂ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.
ಹೊಸ ವರ್ಷ ಹಿನ್ನೆಲೆ ನಂದಿ ಬೆಟ್ಟ ಸುತ್ತಮುತ್ತ ಇರುವ ಹೊಟೇಲ್, ಹೋಮ್ ಸ್ಟೇ ಮತ್ತು ರೆಸಾರ್ಟ್‌ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೋಜು ಮಸ್ತಿ ಹೆಸರಿನಲ್ಲಿ ಕಾನೂನು ಉಲ್ಲಂಘಿಸಿ ಅಂತವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಜತೆಗೆ ಬಾರ್ ಅಂಡ್ ರೆಸ್ಟೋರೆಂಟ್‌ಗಳು ನಿಗದಿತ ಅವಧಿಗೆ ಕ್ಲೋಸ್ ಮಾಡುವಂತೆ ಎಸ್ಪಿ ಆದೇಶಿಸಿದ್ದಾರೆ. ಇನ್ನು ಹೊಸ ವರ್ಷ ದಿನದಂದು ಚಿಕ್ಕಬಳ್ಳಾಪುರದಲ್ಲಿರುವ ಇಶಾ ಪೌಂಡೇಶನ್‌ಗೆ ಸಾವಿರಾರು ಜನರು ಆಗಮಿಸುವ ಹಿನ್ನೆಲೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.