Friday, October 3, 2025
Friday, October 3, 2025

ನಂದಿ ಗಿರಿಧಾಮಕ್ಕೆ 5 ದಿನ ಪ್ರವಾಸಿಗರಿಗೆ ಪ್ರವೇಶ ಇಲ್ಲ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 16ರ ಸಂಜೆ 6 ಗಂಟೆಯಿಂದ ಜೂನ್ 20ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಿದ್ದಾರೆ. ಹಾಗೂ ಜೂನ್ 17ರಿಂದ 19ರವರೆಗೆ ನಂದಿ ಬೆಟ್ಟದ (Nandi Hills) ಮೇಲೆ ವಸತಿ ಕೊಠಡಿಗಳ ಬುಕ್ಕಿಂಗ್ ನಿಷೇಧಿಸಿದ್ದಾರೆ.

ಚಿಕ್ಕಬಳ್ಳಾಪುರ: 2025ನೇ ಸಾಲಿನ 13ನೇ ರಾಜ್ಯ ಸಚಿವ ಸಂಪುಟದ ಸಭೆ (Cabinet Meeting) ಜೂನ್ 19 ರಂದು ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ನಂದಿ ಗಿರಿಧಾಮದಲ್ಲಿ (Nandi Hills) ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಡಿಸಿಎಂ, ಸರಕಾರದ ಸಚಿವ ಸಂಪುಟ ದರ್ಜೆಯ ಎಲ್ಲ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಭಾಗಿಯಾಗುತ್ತಾರೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜೂನ್ 16ರ ಸಂಜೆ 6 ಗಂಟೆಯಿಂದ ಜೂನ್ 20ರ ನಸುಕಿನ ಜಾವ 5 ಗಂಟೆವರೆಗೂ ಸಾರ್ವಜನಿಕರು ನಂದಿ ಬೆಟ್ಟಕ್ಕೆ ಬರದಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್ ಆದೇಶ ಹೊರಡಿಸಿದ್ದಾರೆ.

nandi hills new

ಇನ್ನು ನಂದಿ ಬೆಟ್ಟದ ಮೇಲೆ ಇರುವ ಅತಿಥಿ ಗೃಹಗಳ ಕಾರ್ಯ ಚಟುವಟಿಕೆಗೂ ನಿರ್ಬಂಧ ಹೇರಲಾಗಿದೆ. ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳ ಬುಕಿಂಗ್ ರದ್ದು ಮಾಡಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಹೋಗಲು ಹಾಗೂ ಬರಲು ಒಂದೇ ರಸ್ತೆ ಇದ್ದು ವಾಹನ ದಟ್ಟಣೆ ಹೆಚ್ಚಾಗಲಿದೆ. ನಂದಿ ಬೆಟ್ಟದಲ್ಲಿನ ರಸ್ತೆಗಳು ಕಡಿದಾದ ತಿರುವುಗಳಿಂದ ಕೂಡಿದ್ದು, ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಈ ಹಿನ್ನಲೆಯಲ್ಲಿ ಪೊಲೀಸರು ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು.

ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಿದ್ದಾರೆ. ಹಾಗೂ ಜೂನ್ 17 ರಿಂದ 19 ರವರೆಗೆ ನಂದಿ ಬೆಟ್ಟದ ಮೇಲೆ ವಸತಿ ಕೊಠಡಿಗಳ ಬುಕ್ಕಿಂಗ್ ನಿಷೇಧಿಸಿದ್ದಾರೆ.

Bhagya Divana

Bhagya Divana

Bhagya Divana is a Professional Journalist. Working in Pravasi Prapancha.

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..