Wednesday, August 12, 2026
Wednesday, August 12, 2026

ಸಕಲೇಶಪುರ ಘಾಟ್ ಭಾಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಯಶಸ್ವಿ

ರೈಲ್ವೇ ಸುರಕ್ಷತಾ ಆಯುಕ್ತರು (CRS) ಮತ್ತು ತಾಂತ್ರಿಕ ತಂಡವು ಈ ಪ್ರಾಯೋಗಿಕ ಸಂಚಾರದ ದತ್ತಾಂಶಗಳನ್ನು ಪರಿಶೀಲಿಸಿದ ನಂತರ, ಮಾರ್ಗ ಮಧ್ಯದ ಸುರಕ್ಷತಾ ಅನುಮೋದನೆ ದೊರೆಯಲಿದ್ದು, ಶೀಘ್ರದಲ್ಲೇ ಈ ಮಾರ್ಗದಲ್ಲಿ ಅಧಿಕೃತವಾಗಿ ವಂದೇ ಭಾರತ್ ರೈಲು ಸೇವೆ ಶುರುವಾಗುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕ ಮತ್ತು ರಾಜಧಾನಿ ಬೆಂಗಳೂರು ನಡುವಿನ ಪ್ರಯಾಣಿಕರ ಬಹುದಿನಗಳ ಕನಸಾದ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸೇವೆಯನ್ನು ಆರಂಭಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆಯು ಅತ್ಯಂತ ಮಹತ್ವದ ಹೆಜ್ಜೆಯಿಟ್ಟಿದೆ. ಕಡಿದಾದ ಹಾಗೂ ಸವಾಲಿನಿಂದ ಕೂಡಿದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಇದನ್ನೂ ಓದಿ: ಮಂಗಳೂರು–ಬೆಂಗಳೂರು ರೈಲು ಸಂಚಾರ ಪುನರಾರಂಭ

ಪಶ್ಚಿಮ ಘಟ್ಟಗಳ ಅತ್ಯಂತ ಕಡಿದಾದ ತಿರುವುಗಳು, ಸುರಂಗಗಳು ಹಾಗೂ ಸೇತುವೆಗಳನ್ನು ಹೊಂದಿರುವ ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್‌ವರೆಗಿನ 55 ಕಿಲೋಮೀಟರ್‌ಗಳ ಘಾಟ್ ಮಾರ್ಗದಲ್ಲಿ ವಂದೇ ಭಾರತ್‌ ರೈಲಿನ ಎಂಜಿನ್ ಸಾಮರ್ಥ್ಯ, ಬ್ರೇಕಿಂಗ್ ವ್ಯವಸ್ಥೆ ಹಾಗೂ ವೇಗವನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಕಠಿಣ ತಿರುವುಗಳಲ್ಲೂ ರೈಲು ಅತ್ಯಂತ ಸುಗಮವಾಗಿ ಸಂಚರಿಸಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಮಂಗಳೂರು ಮತ್ತು ಬೆಂಗಳೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳು ಘಾಟ್ ಪ್ರದೇಶದ ಕಠಿಣ ಹಾದಿಯಿಂದಾಗಿ 9 ರಿಂದ 10 ಗಂಟೆಗಳ ಕಾಲ ಸಮಯ ತೆಗೆದುಕೊಳ್ಳುತ್ತವೆ. ಆದರೆ ವಂದೇ ಭಾರತ್ ಎಕ್ಸ್‌ಪ್ರೆಸ್ ಜಾರಿಗೆ ಬಂದರೆ ಈ ಪ್ರಯಾಣದ ಅವಧಿಯು ಕೇವಲ 6.5 ರಿಂದ 7 ಗಂಟೆಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ. ಮಂಗಳೂರು, ಸುಬ್ರಹ್ಮಣ್ಯ, ಹಾಸನ ಮತ್ತು ಬೆಂಗಳೂರು ನಗರಗಳನ್ನು ಸಂಪರ್ಕಿಸುವ ಈ ಹೈ-ಸ್ಪೀಡ್ ರೈಲು ಸೇವೆಯಿಂದಾಗಿ ಉದ್ಯಮಿಗಳು, ವಿದ್ಯಾರ್ಥಿಗಳು, ಕರಾವಳಿಯ ಪ್ರವಾಸಿಗರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ತೆರಳುವ ಧಾರ್ಮಿಕ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಲಿದೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ