Tuesday, July 7, 2026
Tuesday, July 7, 2026

ಜಾಗತಿಕ ಮಟ್ಟದ ಪ್ರವಾಸಿ ತಾಣಗಳ ಆಯ್ಕೆಗೆ ಹಂಪಿಯಲ್ಲಿ ಕಾರ್ಯಾಗಾರ

ಪ್ರವಾಸೋದ್ಯಮ ಇಲಾಖೆ ಆಯೋಜಿಸಿರುವ ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ತಜ್ಞರು, ಪ್ರವಾಸೋದ್ಯಮ ಕ್ಷೇತ್ರದ ಪ್ರತಿನಿಧಿಗಳು ಮತ್ತು ಯೋಜನಾ ಪರಿಣಿತರು ಭಾಗವಹಿಸಿದ್ದು, ಪ್ರವಾಸಿಗರಿಗೆ ಉತ್ತಮ ಮೂಲಸೌಕರ್ಯ, ಸುಗಮ ಸಂಪರ್ಕ, ಸ್ವಚ್ಛತೆ, ಸುರಕ್ಷತೆ ಹಾಗೂ ಗುಣಮಟ್ಟದ ಅನುಭವವನ್ನು ಒದಗಿಸುವ ದೃಷ್ಟಿಯಿಂದ ಆದ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆದಿದೆ.

ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮದ ಪ್ರಮುಖ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಮೊದಲ ಹಂತದಲ್ಲಿ ಯಾವ ಪ್ರವಾಸಿ ತಾಣಗಳನ್ನು ವಿಶ್ವಮಟ್ಟದ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಬೇಕು ಎಂಬುದನ್ನು ಅಂತಿಮಗೊಳಿಸಲು ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿ ಉನ್ನತ ಮಟ್ಟದ ಕಾರ್ಯಾಗಾರ ನಡೆಯಿತು.

ಪ್ರವಾಸೋದ್ಯಮ ಇಲಾಖೆ ಆಯೋಜಿಸಿರುವ ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ತಜ್ಞರು, ಪ್ರವಾಸೋದ್ಯಮ ಕ್ಷೇತ್ರದ ಪ್ರತಿನಿಧಿಗಳು ಮತ್ತು ಯೋಜನಾ ಪರಿಣಿತರು ಭಾಗವಹಿಸಿದ್ದು, ಪ್ರವಾಸಿಗರಿಗೆ ಉತ್ತಮ ಮೂಲಸೌಕರ್ಯ, ಸುಗಮ ಸಂಪರ್ಕ, ಸ್ವಚ್ಛತೆ, ಸುರಕ್ಷತೆ ಹಾಗೂ ಗುಣಮಟ್ಟದ ಅನುಭವವನ್ನು ಒದಗಿಸುವ ದೃಷ್ಟಿಯಿಂದ ಆದ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆದಿದೆ.

Untitled design (12)

ರಾಜ್ಯದ ಐತಿಹಾಸಿಕ, ಸಾಂಸ್ಕೃತಿಕ, ಧಾರ್ಮಿಕ, ಪ್ರಕೃತಿ ಹಾಗೂ ಸಾಹಸ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ಸರಕಾರ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸುತ್ತಿದೆ. ಆಯ್ಕೆಯಾಗುವ ತಾಣಗಳಲ್ಲಿ ರಸ್ತೆ, ಕುಡಿಯುವ ನೀರು, ಶೌಚಾಲಯ, ಸೂಚನಾ ಫಲಕಗಳು, ಪ್ರವಾಸಿಗರ ಮಾಹಿತಿ ಕೇಂದ್ರಗಳು, ಡಿಜಿಟಲ್ ಸೌಲಭ್ಯಗಳು, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತದೆ.

ಈ ಕಾರ್ಯಾಗಾರಕ್ಕೆ ಹಂಪಿಯನ್ನು ಆಯ್ಕೆ ಮಾಡಿರುವುದಕ್ಕೂ ವಿಶೇಷ ಮಹತ್ವವಿದೆ. ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿರುವ ಹಂಪಿ ಕರ್ನಾಟಕದ ಅತ್ಯಂತ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಐತಿಹಾಸಿಕ ಪರಂಪರೆ ಮತ್ತು ಸಾಂಸ್ಕೃತಿಕ ವೈಭವದ ಪ್ರತೀಕವಾಗಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹಂಪಿಯ ಮಾದರಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶವೂ ಸರಕಾರದಾಗಿದೆ.

Untitled design (13)

ಹಂಪಿಯ ಕಾರ್ಯಾಗಾರದಲ್ಲಿ ಕೈಗೊಳ್ಳುವ ನಿರ್ಧಾರಗಳು ಮುಂದಿನ ದಿನಗಳಲ್ಲಿ ಕರ್ನಾಟಕದ ಪ್ರವಾಸೋದ್ಯಮದ ದಿಕ್ಕನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ದೇಶೀಯ ಹಾಗೂ ವಿದೇಶಿ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ಗುರಿ ಹೊಂದಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..