Monday, August 31, 2026
Monday, August 31, 2026

ಆಲಮಟ್ಟಿ–ಯಾದಗಿರಿ ರೈಲು ಮಾರ್ಗ: ಪ್ರವಾಸೋದ್ಯಮಕ್ಕೆ ಹೊಸ ನಿರೀಕ್ಷೆ

ಆಲಮಟ್ಟಿ–ಯಾದಗಿರಿ 162 ಕಿ.ಮೀ. ರೈಲು ಮಾರ್ಗ ನಿರ್ಮಾಣವಾದರೆ ಉತ್ತರ ಕರ್ನಾಟಕದ ಐತಿಹಾಸಿಕ, ಧಾರ್ಮಿಕ ಹಾಗೂ ನೈಸರ್ಗಿಕ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಸಂಚಾರ ಸುಲಭವಾಗಲಿದೆ.

ಆಲಮಟ್ಟಿಯಿಂದ ಯಾದಗಿರಿವರೆಗೆ ಸುಮಾರು 162 ಕಿಮೀ. ಉದ್ದದ ಹೊಸ ರೈಲು ಮಾರ್ಗದ ಸರ್ವೇ ಕಾರ್ಯಕ್ಕೆ ಟೆಂಡರ್‌ ಆಹ್ವಾನಿಸಿರುವುದು ಉತ್ತರ ಕರ್ನಾಟಕದ ಪ್ರವಾಸೋದ್ಯಮಕ್ಕೆ ಹೊಸ ನಿರೀಕ್ಷೆ ಮೂಡಿಸಿದೆ. ಈ ಮಾರ್ಗವು ಆಲಮಟ್ಟಿ, ನಿಡಗುಂದಿ, ಬಸವನಬಾಗೇವಾಡಿ, ಮುದ್ದೇಬಿಹಾಳ, ತಾಳಿಕೋಟೆ, ಹುಣಸಗಿ, ಸುರಪುರ, ಶಹಾಪುರ, ವಡಗೇರಾ ಮೂಲಕ ಯಾದಗಿರಿಯನ್ನು ಸಂಪರ್ಕಿಸುವ ಸಾಧ್ಯತೆಯಿದೆ.

ರೈಲು ಸಂಪರ್ಕ ಕಲ್ಪಿಸಿದರೆ ವಿಜಯಪುರ, ಯಾದಗಿರಿ ಮತ್ತು ಸುತ್ತಮುತ್ತಲಿನ ಐತಿಹಾಸಿಕ ಹಾಗೂ ಧಾರ್ಮಿಕ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಸುಲಭವಾಗಿ ತೆರಳಲು ಸಾಧ್ಯವಾಗಲಿದೆ. ವಿಶೇಷವಾಗಿ ವಿಜಯಪುರದ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಆಲಮಟ್ಟಿ ಜಲಾಶಯ, ಸುರಪುರದ ಐತಿಹಾಸಿಕ ಸ್ಥಳಗಳು ಸೇರಿದಂತೆ ಹಲವು ತಾಣಗಳಿಗೆ ಪ್ರವಾಸಿಗರ ಸಂಚಾರ ಹೆಚ್ಚಾಗುವ ನಿರೀಕ್ಷೆಯಿದೆ.

ರೈಲು ಮಾರ್ಗದಿಂದ ಪ್ರವಾಸಿಗರ ಜತೆಗೆ ಸ್ಥಳೀಯ ಜನರ ಪ್ರಯಾಣವೂ ಸುಲಭವಾಗಲಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚಾದರೆ ಹೊಟೇಲ್‌, ರೆಸ್ಟೋರೆಂಟ್‌, ಸ್ಥಳೀಯ ಸಾರಿಗೆ, ಮಾರ್ಗದರ್ಶಕ ಸೇವೆ ಹಾಗೂ ಸಣ್ಣ ವ್ಯಾಪಾರಗಳಿಗೆ ಉತ್ತೇಜನ ದೊರೆಯಬಹುದು. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿಯೂ ಪ್ರವಾಸೋದ್ಯಮ ಆಧಾರಿತ ಉದ್ಯೋಗಾವಕಾಶಗಳು ಹೆಚ್ಚಾಗುವ ಸಾಧ್ಯತೆಯಿದೆ.

Pramod Mohan Hegde

Pramod Mohan Hegde

A media professional with four years of experience in journalism, having worked with leading Kannada publications such as Vistara, Vijayavani, and Vijaya Karnataka as a cinema journalist. Also an author with a keen interest in travel and cinema. Currently serving as Senior Sub Editor at Pravasi Prapancha, contributing editorial expertise and engaging storytelling to the media industry.

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..